ವಿಚಾರಣೆ ಮುಂದೂಡಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ

ನವದೆಹಲಿ,ಜು.12- ಬೆಂಗಳೂರು ನಗರ ಜಿಲ್ಲಾಧಿಕಾರಿ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು, ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಎಡಿಜಿಪಿ ವಿರುದ್ಧ ನಡೆಸುತ್ತಿರುವ ವಿಚಾರಣೆಯನ್ನು 3 ದಿನಗಳ ಕಾಲ ಮುಂದೂಡುವಂತೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್‍ಗೆ ಸೂಚನೆ ನೀಡಿದೆ. ಎಸಿಬಿಯ ಎಡಿಜಿಪಿ ಸೀಮಂತ್‍ಕುಮಾರ್ ಸಿಂಗ್ ವಿರುದ್ಧ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಚ್.ಪಿ.ಸಂದೇಶ ಅವರು ವ್ಯಕ್ತಪಡಿಸಿದ್ದ ಮೌಖಿಕ ಅಭಿಪ್ರಾಯಗಳು ಹಾಗೂ ಲಿಖಿತ ಆದೇಶಗಳ ಕುರಿತು ಸುಪ್ರಿಂಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ್ದ […]