ಸುಪ್ರೀಂ ಆದೇಶ ನೀಡಿದರೂ ಬಿಬಿಎಂಪಿ ಎಲೆಕ್ಷನ್ ನಡೆಯೋದು ಡೌಟ್

ಬೆಂಗಳೂರು,ಫೆ.21- ಬಿಬಿಎಂಪಿ ಚುನಾವಣೆಗೆ ಮತ್ತೆ ವಿಘ್ನ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಸುಪ್ರೀಂಕೋರ್ಟ್ ಆದೇಶ ನೀಡಿದರೂ ಚುನಾವಣೆ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ.ಬಿಜೆಪಿ ಶಾಸಕರ ಕುತಂತ್ರಕ್ಕೆ ಬಿಬಿಎಂಪಿ ಚುನಾವಣೆ ಸದ್ಯಕ್ಕೆ ನಡೆಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ಚುನಾವಣಾ ಅರ್ಜಿ ವಿಚಾರಣೆ ಹಂತದಲ್ಲಿದೆ. ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿದರೂ ಚುನಾವಣೆ ನಡೆಸಲು ಅಡಚಣೆಯಾಗುವ ಸಾಧ್ಯತೆಯಿದೆ. ಕಾರಣವೆಂದರೆ ಇಂದೇ ಬೆಂಗಳೂರಿನ ಆಸುಪಾಸಿನ ಕೆಲವು ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವುದಾಗಿ ವಾರ್ಡ್ ವಿಂಗಡಣೆಗೆ ಸರ್ಕಾರ ಕೈ ಹಾಕಿತ್ತು. ಆದರೆ […]