ಮೆಡಿಕಲ್ ಸೀಟು ಹಂಚಿಕೆಯಲ್ಲಿ ಒಬಿಸಿ ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ

ನವದೆಹಲಿ, ಜ.20- ಪ್ರಸಕ್ತ ಸಾಲಿನ ವೈದ್ಯಕೀಯ ಶಿಕ್ಷಣ ಪ್ರವೇಶದ ವೇಳೆ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು, ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಶೇ.10ರಷ್ಟು ಮೀಸಲಾತಿ ಪಾಲನೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.ರಾಜ್ಯ ಸರ್ಕಾರಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ, ಜನವರಿ 7ರಂದು ನೀಡಲಾದ ಆದೇಶವನ್ನು ಎತ್ತಿ ಹಿಡಿದಿದೆ. 2021-22ರ ಎನ್‍ಇಇಟಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿಯನ್ನು ಅನುಮತಿಸುವ ಕೇಂದ್ರ ಸರ್ಕಾರದ ನಿರ್ಧಾರ […]