ಇವಿಎಂ ಬದಲು ಮತಪತ್ರ ಬಳಕೆ ; ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ನವದೆಹಲಿ, ಜ.19- ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಸಿದರೆ ಉತ್ತಮ ಎಂದು ವಾದಿಸಿ ಹಿರಿಯ ವಕೀಲ ಎಂ.ಎಲ್.ಶರ್ಮಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲು ಅಂಗೀಕರಿಸಿದೆ. ವಿದ್ಯುನ್ಮಾನ ಮತಯಂತ್ರಗಳನ್ನು ಪರಿಚಯಿಸಲು ದಾರಿ ಮಾಡಿಕೊಟ್ಟಿದ್ದ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 61ಎನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಶರ್ಮಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮನವಿಯನ್ನು ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ನ್ಯಾಯಪೀಠವು ವಕೀಲ ಎಂ.ಎಲ್.ಶರ್ಮ ಅವರು ವೈಯಕ್ತಿಕವಾಗಿ […]