ನಾನಾ ದೇಶಗಳಿಂದ ವಿದೇಶಿಗರ ದಾಂಗುಡಿ, ಬೆಂಗಳೂರಲ್ಲಿ ಹೆಚ್ಚಾಯ್ತು ಕೊರೊನಾ ಆತಂಕ

ಬೆಂಗಳೂರು,ಡಿ.28- ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಸಿಲಿಕಾನ್ ಸಿಟಿಗೆ ಸಾವಿರಾರು ಪ್ರವಾಸಿಗರು ದಾಂಗುಡಿ ಇಡುತ್ತಿರುವುದರಿಂದ ನಗರದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾಲು ಸಾಲು ರಜೆ ಸಿಕ್ಕಿರುವುದರಿಂದ ಸಾವಿರಾರು ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದು, ಬಹುತೇಕ ಹೋಟೆಲ್‍ಗಳು ಪ್ರವಾಸಿಗರಿಂದ ತುಂಬಿ ಹೋಗಿದೆ. ಅನಿವಾಸಿ ಭಾರತೀಯರು ಸೇರಿದಂತೆ ದೇಶ ವಿದೇಶಗಳಲ್ಲಿರುವ ಸಾವಿರಾರು ಮಂದಿ ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಪಂಚತಾರಾ ಹೋಟೆಲ್ ಸೇರಿದಂತೆ ರಾಜ್ಯದ ಬಹುತೇಕ ಹೋಟೆಗಳಿಗೆ ಭರ್ಜರಿ ವ್ಯಾಪಾರವಾಗುತ್ತಿದೆ. ಹೋಟೆಲ್ ಬುಕ್ಕಿಂಗ್ ಜೋರಾಗಿ ನಡೆಯುತ್ತಿದ್ದು, ಹೊಸ ವರ್ಷದ ಆರಂಭದ […]

ಸಾಲು ಸಾಲು ಹಬ್ಬಗಳ ಸಂಭ್ರಮ, ಮತ್ತೆ ಕೋವಿಡ್ ಹೆಚ್ಚಳ ಭೀತಿ

ಬೆಂಗಳೂರು,ಆ.11- ಒಂದು ಕಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಪ್ರಕರಣಗಳು, ಮತ್ತೊಂದು ಕಡೆ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಕೋವಿಡ್ ನಿಯಂತ್ರಣಕ್ಕಾಗಿ ಕೆಲವು ನಿರ್ಬಂಧಗಳನ್ನು ಹಾಕಲು ಮುಂದಾಗಿದೆ. ನಾಳೆ ಅಥವಾ ಶನಿವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಲಿದ್ದು, ನಂತರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಕಳೆದ ವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ […]