ಅಧಿವೇಶನ ಆರಂಭವಾಗಿ ವಾರಕಳೆದರೂ ನಿಲ್ಲದ ಸಾಲು ಸಾಲು ಪ್ರತಿಭಟನೆಗಳು

ಬೆಳಗಾವಿ, ಡಿ.26- ಚಳಿಗಾಲದ ಅಧಿವೇಶನ ಆರಂಭವಾಗಿ ವಾರ ಕಳೆದರೂ ಪ್ರತಿಭಟನೆಗಳು ಮಾತ್ರ ನಿಂತಿಲ್ಲ. ಇಂದೂ ಸಹ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಸಾಲುಸಾಲು ಪ್ರತಿಭಟನೆಗಳು ನಡೆದಿವೆ. ಸುವರ್ಣಸೌಧ ಬಳಿಯ ಬಸ್ತವಾಡ ಹಾಗೂ ಕೊಂಡಸಕಪ್ಪದ ಪ್ರತಿಭಟನಾ ಟೆಂಟ್‍ನಲ್ಲಿ ವಿವಿಧ ಸಂಘಟನೆಗಳಿಂದ ಧರಣಿ ನಡೆಸಲಾಯಿತು. ಕೆಲವು ಸಂಘಟನೆಗಳಿಂದ ತಮ್ಮ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಅರಣ್ಯ ಒತ್ತುವರಿ ಸಾಗುವಳಿದಾರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಯಿತು. ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ […]

ಸುವರ್ಣ ವಿಧಾನಸೌಧದಲ್ಲಿ ಕೋವಿಡ್ ಲಸಿಕಾ ಕೇಂದ್ರ ಆರಂಭ

ಬೆಳಗಾವಿ, ಡಿ.26-ಮಹಾಮಾರಿ ಕೋವಿಡ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕು ತಡೆಗಟ್ಟುವ ಚಟುವಟಿಕೆಗಳು ಬೀರಿಸುಗೊಂಡಿವೆ. ಕಳೆದೊಂದು ವಾರದಿಂದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ಇಂದಿನಿಂದ ಆರಂಭಿಸಲಾಗಿದೆ. ಸುವರ್ಣಸೌಧದ ಪೂರ್ವದ್ವಾರ, ವಿಧಾನಸಭೆ ಮತ್ತು ವಿಧಾನಪರಿಷತ್ ಮೊಗಸಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ವಿಧಾನಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಪ್ರಕಟಿಸಿದ್ದಂತೆ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಶಾಸಕರು, ಅಧಿಕಾರಿಗಳು, ಇತರೆ ಸಿಬ್ಬಂದಿ ಮತ್ತು ಮಾಧ್ಯಮವರಿಗೂ ಉಚಿತವಾಗಿ ಲಸಿಕೆ […]

ಸುವರ್ಣಸೌಧದಲ್ಲಿ ಮಾಸ್ಕ್ ಕಡ್ಡಾಯ

ಬೆಳಗಾವಿ, ಡಿ.23- ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೋವಿಡ್ ಕಾಣಿಸಿಕೊಳ್ಳುವ ಆತಂಕದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಎಲ್ಲ ಕರ್ತವ್ಯನಿರತ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಕಾರ್ಯಗಳಲ್ಲಿ ನಿರತ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಅವರು ಸೂಚಿಸಿದ್ದಾರೆ. ಹೀಗಾಗಿ ಸುವರ್ಣ ವಿಧಾನಸೌಧ ಸಿಬ್ಬಂದಿ, ಪೊಲೀಸರು, ತಪಾಸಣೆ ಸಿಬ್ಬಂದಿ ಸೇರಿದಂತೆ ಹಲವರು ಮತ್ತೆ ಮಾಸ್ಕ್ ಧರಿಸಿರುವುದು, ಸ್ಯಾನಿಟೈಸರ್ ಬಳಕೆ ಕಂಡು […]

2006ರಿಂದ ಬೆಳಗಾವಿಯಲ್ಲಿ ಈವರೆಗೆ 100 ದಿನ ನಡೆದ ಅಧಿವೇಶನ

ಬೆಳಗಾವಿ, ಡಿ.22- ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಅಧಿವೇಶನವು ನೂರು ದಿನಗಳನ್ನು ಪೂರ್ಣಗೊಳಿಸಿದೆ. ಕಳೆದ 2006ರಲ್ಲಿ ಪ್ರಾರಂಭವಾದ ಬೆಳಗಾವಿಯ ಅಧಿವೇಶನವು ಇಂದಿನವರೆಗೆ ನೂರು ದಿನಗಳನ್ನು ಪೂರ್ಣಗೊಳಿಸಿದೆ. ಶತಕದ ದಾಖಲೆಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಪ್ರಾರಂಭಿಸಲಾಯಿತು. 12ನೆ ವಿಧಾನಸಭೆಯ ನಾಲ್ಕನೆ ಅಧಿವೇಶನವು 2006ರ ಸೆಪ್ಟಂಬರ್ 25ರಿಂದ 29ರವರೆಗೆ ಕೆಎಲ ಇ ಸಂಸ್ಥೆಯಲ್ಲಿ ಐದು ದಿನಗಳ ಕಾಲ ನಡೆದಿತ್ತು. ಇದು ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಉಭಯ ಸದನಗಳ […]

ಹೆಚ್ಚಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು

ಬೆಂಗಳೂರು,ಡಿ.21- ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ನಾಳೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸರ್ಕಾರಕ್ಕೆ ತಲೆನೋವಾಗಿ ಮತ್ತೊಂದು ವಿಘ್ನ ಎದುರಾಗಿದೆ.ಬಸವಕಲ್ಯಾಣದ ಜಯಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ಸವದತ್ತಿಯಿಂದ ಈಗಾಗಲೇ ಪಾದಯಾತ್ರೆ ಹೊರಟ್ಟಿದ್ದು, ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯಲ್ಲಿ ಅಂದಾಜು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದು, ಸರ್ಕಾರಕ್ಕೆ ಗಡುವು ನೀಡಿರುವಂತೆ ನಾಳೆ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರವನ್ನು ಪ್ರಕಟಿಸಬೇಕೆಂದು ಶ್ರೀಗಳು ಪಟ್ಟು ಹಿಡಿದಿದ್ದಾರೆ. ಈ ಬೆಳವಣಿಗೆಗಳ ನಡುವೆಯೇ ನಾಳೆ ಮುಖ್ಯಮಂತ್ರಿ ಬಸವರಾಜ […]

ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು. ಅ.18-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ ಎರಡನೇ ವಾರದಿಂದ ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಪ್ರತಿ ವರ್ಷದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವ ಸಂಪ್ರದಾಯವಿದೆ. ಅದರಂತೆ ಈ ಬಾರಿಯ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತದೆ. ಅಂದರೆ ಡಿ.12ರಿಂದ 23ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸುವರ್ಣ ವಿಧಾನಸೌಧ ನಿರ್ಮಾಣಗೊಂಡು ಹತ್ತು ವರ್ಷಗಳು ಕಳೆದ ಬಳಿಕ […]