NEP ಪಠ್ಯಕ್ರಮ ಜಾರಿಗೆ ತಜ್ಞರ ಸಮಿತಿ ರಚನೆ

ಬೆಂಗಳೂರು,ನ.15- ಮುಂಬರುವ ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಜಾರಿ ಮಾಡುವ ಸಂಬಂಧ ರಾಜ್ಯ ಪಠ್ಯ ಕ್ರಮ ಚೌಕಟ್ಟು ರಚನೆಗಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬೇಕು. ರಾಜ್ಯ ಪಠ್ಯಕ್ರಮ ಚೌಕಟ್ಟು ಕುರಿತಾಗಿ ಶಿಕ್ಷಣ […]