ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ದೇವೇಗೌಡರ ಹೆಸರಿಡಿ: ಶರವಣ

ಬೆಂಗಳೂರು, ಜ.5-ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಿ ಎಂದು ಜೆಡಿಎಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಟಿ. ಎ.ಶರವಣ ಮನವಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವೀಕ್ಷಣೆ ಮತ್ತು ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದರೆ, ಈ ಮಹಾರಸ್ತೆಗೆ ಕರ್ನಾಟಕದ ಸಾಕ್ಷಿ ಪ್ರಜ್ಞೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಡಿ ಎಂದು […]