ಪಾದಯಾತ್ರೆ ಹೆಸರಲ್ಲಿ ಜನರ ಜೀವಗಳ ಜೊತೆ ಚೆಲ್ಲಾಟವಾಡುತ್ತಿದೆ ಕಾಂಗ್ರೆಸ್ : ಶರವಣ

ಬೆಂಗಳೂರು, ಜ.10-ಕೋವಿಡ್ ಮಹಾಮಾರಿ ಮಿತಿ ಮೀರಿದ ಈ ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ಕಾಂಗ್ರೆಸ್ ಮರೆತು, ಜನರ ಜೀವವನ್ನು ಪಣಕ್ಕಿಟ್ಟು ಪಾದಯಾತ್ರೆ ಮಾಡುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ. ಶರವಣ ಟೀಕಿಸಿದ್ದಾರೆ. ಮೇಕೆದಾಟು ಯೋಜನೆಯ ನೆಪದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಕೋವಿಡ್ ಕಾಲ ಘಟ್ಟದ ಜೀವ ವಿರೋ ಪ್ರತಿಭಟನೆಯಾಗಿದ್ದು, ಜೀವಗಳ ಜೊತೆ ಚೆಲ್ಲಾಟ ಮಾಡುವ ರಾಜಕೀಯ ತಕ್ಷಣ ನಿಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಅಗ್ರಹಿಸಿದ್ದಾರೆ.ಪ್ರಜಾಸತ್ತೆ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ಅವರವರ ಹಕ್ಕು. ಸಂವಿಧಾನ […]