ತಂತ್ರಜ್ಞಾನ ಮತ್ತು ಪ್ರತಿಭೆ ಭಾರತದ ಅಭಿವೃದ್ಧಿ ಪಯಣದ ಎರಡು ಸ್ತಂಭಗಳು : ಮೋದಿ

ಹೈದರಾಬಾದ್, ಅ.11- ತಂತ್ರಜ್ಞಾನ ಮತ್ತು ಪ್ರತಿಭೆ ಭಾರತದ ಅಭಿವೃದ್ಧಿ ಪಯಣದ ಎರಡು ಆಧಾರ ಸ್ತಂಭಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಎರಡನೇ ಜಾಗತಿಕ ಜಿಯೋಸ್ಪೇಷಿಯಲ್ ಇನಾರ್ಮೇಶನ್ ಕಾಂಗ್ರೆಸ್-2022ಕ್ಕೆ ವಿಡಿಯೋ ಸಂದೇಶ ರವಾನಿಸಿರುವ ಪ್ರಧಾನಿಯವರು, ದೇಶದ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ತಮ್ಮ ಸರ್ಕಾರ ಅಂತ್ಯೋದಯದ ದೃಷ್ಟಿಕೋದಲ್ಲಿ ಕೆಲಸ ಮಾಡುತ್ತಿದೆ. ದೇಶದ ಕೊನೆಯ ಮೈಲಿನಲ್ಲಿರುವ ಕೊನೆಯ ವ್ಯಕ್ತಿಗೂ ಸೌಲಭ್ಯ ಸಿಗಬೇಕು, ಆತ ಸಬಲೀಕರಣಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಮಿಷನ್ ಮೋಡ್ನಲ್ಲಿ ಕೆಲಸ ಮಾಡಲಾಗುತ್ತಿದೆ […]