ಜಿ.ಪಂ-ತಾ.ಪಂ ಚುನಾವಣೆ ಮುಂದೂಡುವ ಉದ್ದೇಶವಿಲ್ಲ : ಸಚಿವ ಈಶ್ವರಪ್ಪ

ಬೆಂಗಳೂರು,ಫೆ.11-ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಸಲು ನಾವು ಪ್ರಸ್ತಾವನೆಯನ್ನು ಕಳುಹಿಸಿದ್ದೆವು. ಕ್ಷೇತ್ರ ವಿಂಗಡಣೆ, ಮೀಸಲಾತಿ ಬಗ್ಗೆ ಮಸೂದೆಯನ್ನು ತರಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿನಾರಾಯಣ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಎಸ್ಸಿ-ಎಸ್ಟಿಗೆ ಮಾತ್ರ ಮೀಸಲಾತಿ ಮಾತ್ರ ನೀಡಬೇಕಾಗಿದೆ ಎಂದು ಹೇಳಿದರು.ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಕೊಡುವಂತಿಲ್ಲ. ಹೀಗಾಗಿ ಸಾಮಾಣ್ಯ ವರ್ಗದಲ್ಲೇ ಒಬಿಸಿ ಬರುತ್ತವೆ. […]