ಜಯಲಲಿತಾ ಸಾವು ಪ್ರಕರಣ : ಶಶಿಕಲಾ ವಿರುದ್ಧ ತನಿಖೆಗೆ ಶಿಫಾರಸು
ಚೆನ್ನೈ, ಆ.30- ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಆರ್ಮುಗಂ ಸ್ವಾಮಿ ಅವರ ಆಯೋಗವು ಜಯಾ ಅವರ ಮಾಜಿ ಸಹಾಯಕಿ ವಿ.ಕೆ.ಶಶಿಕಲಾ ಹಾಗೂ ಇತರರ ವಿರುದ್ಧ ತನಿಖೆ ನಡೆಸುವಂತೆ ಶಿಫಾರಸು ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಆರ್ಮುಗಂ ಸ್ವಾಮಿ ಆಯೋಗದ ವರದಿಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾಗಿದ್ದು, ವರದಿ ಕುರಿತು ಕಾನೂನು ಅಭಿಪ್ರಾಯ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2021ರ ಚುನಾವಣಾ ಪ್ರಚಾರದ ಸಮಯದಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ಜಯಲಲಿತಾ ಅವರ […]