ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಮನೆಗೆ ತರಳಬಾಳು ಶ್ರೀಗಳ ಭೇಟಿ

ಹಾವೇರಿ : ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಬಲಿಯಾದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡ್ರ ನಿವಾಸಕ್ಕೆ ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ದಯಮಾಡಿಸಿ ನವೀನ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ನವೀನ್ ತಂದೆ ಶೇಖರಪ್ಪ ಗ್ಯಾನಗೌಡ್ರ, ತಾಯಿ ವಿಜಯಮ್ಮ ನವೀನ್ ಸಹೋದರನಾದ ಹರ್ಷ ಮತ್ತು ಕುಟುಂಬದವರಿಗೆ ಸಾಂತ್ವನ ಮತ್ತು ಧೈರ್ಯ ತುಂಬಿದರು. ಶ್ರೀ ಜಗದ್ಗುರುಗಳವರು ಮನೆ ಪ್ರವೇಶಿಸುತ್ತಿದ್ದಂತೆ ಮಡುಗಟ್ಟಿದ್ದ ಕುಟುಂಬದವರ ದುಃಖದ ಕಟ್ಟೆ ಒಡೆದು ಆಕ್ರಂದನದ […]