ಕಳೆದ 6 ತಿಂಗಳಲ್ಲಿ ಭರ್ಜರಿ ತೆರಿಗೆ ಕಲೆಕ್ಷನ್ ಮಾಡಿದ ರಾಜ್ಯ ಸರ್ಕಾರ, ಇಲ್ಲಿದೆ ಲೆಕ್ಕ

ಬೆಂಗಳೂರು,ಅ.25- ರಾಜ್ಯ ಸರ್ಕಾರ ತನ್ನ ಪ್ರಮುಖ ತೆರಿಗೆ ಮೂಲವಾದ, ವಾಣಿಜ್ಯ ತೆರಿಗೆ ಮೂಲಕ ಭರ್ಜರಿ ಆದಾಯ ಸಂಗ್ರಹ ಮಾಡಿದ್ದು, ಕಳೆದ ಆರು ತಿಂಗಳಲ್ಲಿ 47,435.05 ಕೋಟಿ ರೂ. ತೆರಿಗೆಯನ್ನು ಸಂಗ್ರಹಿಸಿದೆ.2022-23 ಸಾಲಿನಲ್ಲಿ ರಾಜ್ಯ ಸರ್ಕಾರ ನಿರೀಕ್ಷೆಗಿಂತ ಹೆಚ್ಚಿನ ಆದಾಯ ಸಂಗ್ರಹ ಮಾಡುತ್ತಿದೆ. ಕೋವಿಡ್ ಲಾಕ್‍ಡೌನ್ ಏಟಿನ ಬಳಿಕ ಆರ್ಥಿಕತೆ ಚೇತರಿಸಿಕೊಂಡಿದ್ದು, ತೆರಿಗೆ ಸಂಗ್ರಹದಲ್ಲಿ ಉತ್ತಮ ಪ್ರಗತಿ ಕಂಡಿದೆ. ಅದರಲ್ಲೂ ಪ್ರಮುಖ ಆದಾಯ ಮೂಲವಾದ ವಾಣಿಜ್ಯ ತೆರಿಗೆ ನಿರೀಕ್ಷೆಗಿಂತ ಭರಪೂರ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದೆ. ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ […]