ಬಿಹಾರ ಸಚಿವ ಸಂಪುಟ ವಿಸ್ತರಣೆ

ಪಾಟ್ನಾ, ಆ.16- ಬಿಹಾರದಲ್ಲಿ ಮಹಾಘಟ್ ಬಂಧನ್ ಮೂಲಕ ಅಧಿಕಾರಕ್ಕೆ ಬಂದ ಹೊಸ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಇಂದು ನಡೆದಿದೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜೆಸ್ವಿ ಯಾದವ್ ಅವರ ಸಮ್ಮುಖದಲ್ಲಿ 31 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಹಾರದ ವಿಧಾನಸಭೆ ಸಂಖ್ಯಾಬಲ ಆಧರಿಸಿ 36 ಸಚಿವರಿಗೆ ಅವಕಾಶ ಕಲ್ಪಿಸಬಹುದಾಗಿದೆ. ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಂಪುಟದಲ್ಲಿ ಇರುವುದರಿಂದ ಇಂದು 31 ಮಂದಿ ನೂತನ ಸಚಿವರಾಗಿದ್ದಾರೆ. ದೊಡ್ಡ ರಾಜಕೀಯ ಪಕ್ಷವಾಗಿರುವ ಆರ್‍ಜೆಡಿಯಿಂದ […]