ಸಂಸದ ತೇಜಸ್ವಿ ಸೂರ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರು,ಜು.30- ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಸಬಹುದಿತ್ತು ಎಂದು ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ನಗರದಲ್ಲಿರುವ ಸಂಸದರ ನಿವಾಸದತ್ತ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಕಲ್ಲುಗಳನ್ನು ಕೊಟ್ಟು, ಹೊಡೆಸುವಂತೆ ಸವಾಲು ಹಾಕುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಕಲ್ಲು ಹೊಡೆಯುವ ಮನಸ್ಥಿತಿ ಬೇಡ ಎಂದು ತಿಳಿ ಹೇಳಲು ಹೂಗಳನ್ನು ಉಡುಗೊರೆ ನೀಡಲು ಯತ್ನಿಸಿದ್ದಾರೆ. ಸಂಸದರ ಮನೆಯತ್ತ ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. […]