ರಾಜ್ಯದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಗಾಳಿಯಿಂದ ತಪ್ಪಿಸಿಕೊಳ್ಳೋದು ಹೇಗೆ..?

ಬೆಂಗಳೂರು,ಮಾ.7- ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಬಿಸಿಗಾಳಿ ಹಾವಳಿಯಿಂದ ತಪ್ಪಿಸಿಕೊಳ್ಳಲು ಕೆಲವು ಕಟ್ಟುನಿಟ್ಟಿನ ಸೂಚನೆ ಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ. ಉಷ್ಣಾಂಶ ಏರಿಕೆಯಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಕೆಲವು ಸಲಹೆಗಳನ್ನು ಪಾಲಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಾಯಾರಿಕೆ ಇಲ್ಲದಿದ್ದರೂ ಪದೇ ಪದೇ ನೀರು ಕುಡಿಯುತ್ತಿರಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು. ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಹತ್ತಿ ಬಟ್ಟೆ ಧರಿಸುವುದು ಉತ್ತಮ ಇದರ ಜತೆಗೆ ಮನೆಯಲ್ಲೇ ಸಿದ್ದಪಡಿಸಿದ […]