ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು,ನ.11- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆಯ ಭಾಗವಾಗಿ ನಿರ್ಮಿಸಲಾಗಿದ್ದ ಟರ್ಮಿನಲ್-2ನ್ನು ಪ್ರಧಾನಿ ನರೇಂದ್ರಮೋದಿ ಇಂದು ಲೋಕಾರ್ಪಣೆಗೊಳಿಸಿದರು. ಭಾರತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕೆಐಎಎಲ್‍ನ್ನು ವಿಸ್ತರಣೆ ಮಾಡಲಾಗಿದೆ.ಟರ್ಮಿನಲ್ 2, ಎರಡನೇ ರನ್‍ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲ ಸೌಕರ್ಯವನ್ನು ಒಳಗೊಂಡಿದೆ. ಎರಡನೇ ಟರ್ಮಿನಲ್‍ನ್ನು ಎರಡು ಹಂತದಲ್ಲಿ ಅಭಿವೃದ್ಧಿ ಮಾಡಲಾಗಿದ್ದು, ಮೊದಲನೇ ಹಂತದಲ್ಲಿ 25 ಮಿಲಿಯನ್ […]

ನಾಳೆ ಬೆಂಗಳೂರಲ್ಲಿ ಮೋದಿ ಮೇನಿಯಾ, ಇಲ್ಲಿದೆ ಕಾರ್ಯಕ್ರಮಗಳ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು,ನ.10- ನಾಡ ಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ, ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟನೆ, ವಂದೇ ಭಾರತ್ ರೈಲಿಗೆ ಚಾಲನೆ, ಕನಕ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಹು ದಿನಗಳ ನಂತರ ಪ್ರಧಾನಿ ನಗರಕ್ಕೆ ಆಗಮಿಸುತ್ತಿರುವುದರಿಂದ ಬಿಜೆಪಿ ಪಾಳಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಚುನಾವಣ ವರ್ಷವಾಗಿರುವುದರಿಂದ ಪ್ರಧಾನಿ ಕಾರ್ಯಕ್ರಮವನ್ನು ಬಿಜೆಪಿ ಸಂಪೂರ್ಣವಾಗಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿದೆ. ವಿಶೇಷವಾಗಿ ಒಕ್ಕಲಿಗ ಮತಗಳನ್ನು ಸೆಳೆಯುವ […]

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಮುಕುಟ

ಬೆಂಗಳೂರು,ನ.9- ಹಲವು ವಿಶಿಷ್ಟತೆಗಳಿಂದ ಅಂತಾರಾಷ್ಟ್ರೀಯ ಗಮನಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಮುಕುಟ ಪ್ರಾಪ್ತವಾಗಲಿದೆ. ದೇಶದಲ್ಲೇ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿ ಅವರು 2ನೇ ಟರ್ಮಿನಲ್‍ಗೆ ಉದ್ಘಾಟನೆ ಮಾಡಲಿದ್ದಾರೆ. ಇದರಿಂದ ಇನ್ನುಮುಂದೆ ವಿಮಾನ ನಿಲ್ದಾಣಕ್ಕೆ ದೇಶ-ವಿದೇಶಗಳಿಂದ ಬಂದುಹೋಗುವ ವಿಮಾನಗಳು ಮತ್ತು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಲಿದೆ. ಟರ್ಮಿನಲ್-2ನ್ನು […]

ನ.11ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು,ಅ.19- ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಲಿದ್ದಾರೆ. ಟರ್ಮಿನಲ್ 2 ಅಥವಾ ಟ2 ಅನ್ನು ಎರಡು ಹಂತಗಳಲ್ಲಿ 13,000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 2.54 ಲಕ್ಷ ಚದರ ಅಡಿ ವಿಸ್ತೀರ್ಣ ಹೊಂದಿರುವ ಟಿ2ನ ಮೊದಲ ಹಂತವನ್ನು ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳಿಸಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಹೊಂದಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರ್ಷಕ್ಕೆ ಲಕ್ಷಾಂತರ ಜನ ಪ್ರಯಾಣಿಸುತ್ತಾರೆ. […]