ಭಯೋತ್ಪಾದನೆ ನಿಗ್ರಹಕ್ಕೆ ಸರ್ಕಾರ ಬದ್ಧ : ಆರಗ ಜ್ಞಾನೇಂದ್ರ

ಮಂಗಳೂರು, ನ.23- ರಾಜ್ಯದಲ್ಲಿ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗೆ ಸರ್ಕಾರ ಬದ್ಧವಾಗಿದೆ ಎಂದು ಗೃಹಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ತಿಳಿಸಿದರು. ನಗರದಲ್ಲಿ ಆಟೋರಿಕ್ಷಾ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಸಚಿವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತೀರ್ಥಹಳ್ಳಿ ಮೂಲದ ಉಗ್ರ ಶಾರಿಕ್ಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಆತ ಗುಣಮುಖವಾಗಿ ಆರೋಗ್ಯ ಸುಧಾರಿಸಿದರೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದರು.ತೀರ್ಥಹಳ್ಳಿ ಮೂಲದ ಶಾರಿಕ್ ಹಿನ್ನೆಲೆ […]