ಪಠಾಣ್ ಚಿತ್ರದ ವಿರುದ್ಧ ಕರ್ನಾಟಕದಲ್ಲೂ ಭುಗಿಲೆದ್ದ ಆಕ್ರೋಶ

ಬೆಂಗಳೂರು,ಜ.25- ಬಿಡುಗಡೆಗೆ ಮೊದಲು ತೀವ್ರ ವಿವಾದ ಸೃಷ್ಟಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ. ಬೆಳಗಾವಿ, ಕಲಬರುಗಿ, ಹುಬ್ಬಳ್ಳಿ ಮತ್ತಿತರ ಕಡೆ ಚಿತ್ರ ಬಿಡುಗಡೆಗೆ ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತಕ್ಷಣವೇ ಬಂದ್ ಮಾಡಬೇಕೆಂದು ಆಗ್ರಹಿಸಿದೆ. ಈ ಸಂದರ್ಭದಲ್ಲಿ ಚಿತ್ರಮಂದಿರದ ಮಾಲೀಕರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಬೆಳಗಾವಿ […]
ಜನ ಸಂಕಷ್ಟದಲ್ಲಿರುವಾಗ ಸಚಿವರು ಸಿನಿಮಾ ಥಿಯೇಟರ್‌ನಲ್ಲಿ ಮೋಜು : ಕಾಂಗ್ರೆಸ್ ಟೀಕೆ
ಬೆಂಗಳೂರು, ಆ.20- ನೆರೆಯಿಂದ ಜನ ಸಂಕಷ್ಟದಲ್ಲಿರುವಾಗ ಸರ್ಕಾರದ ಸಚಿವರು ಸಿನಿಮಾ ಥಿಯೇಟರ್‌ನಲ್ಲಿ ಮೋಜು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಟ್ವಿಟರ್‌ನಲ್ಲಿ ತನ್ನ ಆಕ್ರೋಶವನ್ನು ಹೊರ ಹಾಕಿರುವ ಕಾಂಗ್ರೆಸ್, ಶೇ.40 ಸರ್ಕಾರದ ಸಚಿವರನ್ನು ಬೇರೆಲ್ಲೂ ಹುಡುಕುವುದು ಬೇಡ. ಸಿನೆಮಾ ಥಿಯೇಟರ್‌ನಲ್ಲಿ ಹುಡುಕಿದರೆ ಸಾಕು. ರೈತರು ಅತಿವೃಷ್ಟಿ ಗೊಬ್ಬರದ ಕೊರತೆಯಂತಹ ಸಮಸ್ಯೆ ಎದುರಿಸುವಾಗ ಕೃಷಿ ಸಚಿವರು ಸಿನೆಮಾ ವೀಕ್ಷಣೆಯ ಮೋಜಿನಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರೈತರು ಸಾಯುತ್ತಿದ್ದಾರೆ, ಕೃಷಿ ಸಚಿವ ಬಿ.ಸಿ.ಪಾಟೀಲ್, ರೀಲ್ ಲೈಫ್‍ನಿಂದ ರಿಯಲ್ ಲೈಫ್‍ಗೆ ಬರುವುದು […]