ಕೋವಿಡ್ ಪ್ರಮಾಣ ಏರಿಕೆ 3ನೇ ಅಲೆ ಸುಳಿವಲ್ಲವೇ..?: ಸಚಿವ ಸುಧಾಕರ್

ಬೆಂಗಳೂರು,ಜ.4- ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆಯಾಗಿರುವುದು ಮೂರನೇ ಅಲೆಯ ಸುಳಿವಲ್ಲವೇ? ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.0.4ರಷ್ಟಿದ್ದ ಪಾಸಿಟಿವಿಟಿ ದರ ಶೇ.1.6ಕ್ಕೆ ಏರಿಕೆಯಾಗಿದೆ. ಇದು ಮೂರನೇ ಅಲೆ ಅಲ್ಲವೇ? ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು. ರಾಜ್ಯದಲ್ಲಿ ನಿನ್ನೆ 1290 ಪಾಸಿಟಿವ್ ಪ್ರಕರಣಗಳು ಬಂದಿದ್ದು ಇದರಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಸೇರಿವೆ. ನೆರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಒಳಗೊಂಡಂತೆ ಸಾಮಾನ್ಯ ಜನರ ಮೇಲೆ […]