ಪಟಾಕಿ ಅಂಗಡಿಯಲ್ಲಿ ಬೆಂಕಿ : ಮೂವರು ದುರ್ಮರಣ, 7 ಮಂದಿಗೆ ಗಾಯ

ಚೆನ್ನೈ,ಜ.5- ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಮೂವರು ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ಇಂದು ನಡೆದಿದೆ. ತಮಿಳುನಾಡಿನ ವಿರುದುನಗರದ ಸತ್ತೂರು ಸಮೀಪದ ಮಂಜಲೋಡೈಪಟ್ಟಿಯಲ್ಲಿರುವ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.  ಘಟನೆಯ ಕುರಿತು ಟ್ವೀಟ್ ಮಾಡಿರುವ ಜಿಲ್ಲಾ ಕಲೆಕ್ಟರ್ ಮೇಘನಾಥ್ ರೆಡ್ಡಿ, ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಗಾಂಡಿರುವ ಏಳು […]