ಜೆಡಿಎಸ್ ನತ್ತ ಕಾಂಗ್ರೆಸ್-ಬಿಜೆಪಿ ಟಿಕೆಟ್ ವಂಚಿತರು

ಬೆಂಗಳೂರು,ನ.3- ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್„ಸಲು ಅವಕಾಶ ಸಿಗುವುದಿಲ್ಲ ಎಂದು ಖಾತ್ರಿಯಾಗಿರುವ ಮುಖಂಡರು ಜೆಡಿಎಸ್ನತ್ತ ಮುಖ ಮಾಡತೊಡಗಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ವಲಸೆ ಬರುವ ನಾಯಕರೊಂದಿಗೆ ಜೆಡಿಎಸ್ ನಾಯಕರು ನಿಕಟ ಸಂಪರ್ಕದಲ್ಲಿದ್ದಾರೆ. ಬೆಳಗಾವಿ, ಬಳ್ಳಾರಿ, ಧಾರವಾಡ ಹಾಗೂ ಬೆಂಗಳೂರು ಜಿಲ್ಲೆಯಲ್ಲಿ ಜೆಡಿಎಸ್ನತ್ತ ಮುಖ ಮಾಡುತ್ತಿರುವ ರಾಜಕೀಯ ಪಕ್ಷಗಳ ನಾಯಕರು ಹೆಚ್ಚಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಇದು ಘನಘೋರ […]