ಲವ್ ಫೇಲ್ಯೂರ್, ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ವೈದ್ಯ

ಚೆನ್ನೈ,ಜ.28- ಪ್ರೇಮ ವೈಫಲ್ಯದಿಂದ ಮನನೊಂದ ವೈದ್ಯರೊಬ್ಬರು ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. 29 ವರ್ಷದ ವೈದ್ಯ ಕಾಂಚೀಪುರಂನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ವಿದ್ಯಾರ್ಥಿನಿಯೊಬ್ಬರನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಓದು ಮುಗಿದ ನಂತರ ಆಕೆ ವೈದ್ಯನ ಪ್ರೀತಿಯನ್ನು ನಿರಾಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವೈದ್ಯ ತನ್ನ ಪ್ರೇಮಿಯೊಂದಿಗೆ ಅತಿ ಹೆಚ್ಚು ಕಾಲ ಕಳೆಯುತ್ತಿದ್ದ ಸ್ಥಳಕ್ಕೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮರ್ಸಿಡಿಸ್ ಕಾರಿಗೆ ಬೆಂಕಿ […]