ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು, ಮಾ. 17- ಕಳೆದ ಎರಡು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾದ ವರದಿಯಾಗಿದೆ. ಬುಧವಾರ ರಾತ್ರಿ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡ ಮಳೆಯಾದ ವರದಿಯಾಗಿತ್ತು. ನಿನ್ನೆ ಸಂಜೆ ಹಾಗೂ ರಾತ್ರಿ ಕೂಡ ಮಳೆ […]