‘ಟಿಪ್ಪು ನಿಜ ಕನಸುಗಳು’ ಪುಸ್ತಕ ಮಾರಾಟ, ಹಂಚಿಕೆ ಮಾಡದಂತೆ ಕೋರ್ಟ್ ತಡೆ

ಬೆಂಗಳೂರು,ನ.23-ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ ಟಿಪ್ಪು ನಿಜ ಕನಸುಗಳು ಪುಸ್ತಕವನ್ನು ಆನ್ಲೈನ್ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಬೆಂಗಳೂರು ನಿವಾಸಿಯಾದ ಜಿಲ್ಲಾ ವಕ್ ಮಂಡಳಿಯ ಮಾಜಿ ಅಧ್ಯಕ್ಷ ರಫಿವುಲ್ಲಾ ಬಿ.ಎಸ್. ಎಂಬವರು ಸಲ್ಲಿಸಿದ್ದ ದಾವೆ ವಿಚಾರಣೆ ನಡೆಸಿದ 15ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾೀಧಿಶರಾದ ಜೆ.ಆರ್. ಮೆಂಡೋನ್ಸಾ ಅವರ ನೇತೃತ್ವದ ಪೀಠವು ಆದೇಶ […]