ತಿರಂಗಗಾಗಿ ಬಡವರಿಂದ ಹಣ ವಸೂಲಿ : ವರುಣ್ ಗಾಂಧಿ ಆಕ್ಷೇಪ

ನವದೆಹಲಿ, ಆ.10- ನ್ಯಾಯಬೆಲೆ ಅಂಗಡಿಯಲ್ಲಿ ಬಲವಂತವಾಗಿ ತ್ರಿವರ್ಣ ಧ್ವಜ ಹಾರಾಟ ಮಾಡುತ್ತಿರುವುದು, ಅದಕ್ಕಾಗಿ ಬಡ ಜನರಿಂದ ಹಣ ವಸೂಲಿ ಮಾಡುವುದು ನಾಚಿಕೆಗೇಡು ಎಂದು ಬಿಜೆಪಿಯ ಸಂಸದ ವರುಣ್ಗಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಬೆಲೆ ಅಂಗಡಿ ಮುಂದೆ ಬಡವರ ಅಸಹಾಯಕ ಹೇಳಿಕೆಗಳ ಮಾಧ್ಯಮ ವರದಿಯನ್ನು ಟ್ವೀಟರ್ನಲ್ಲಿ ಪೊೀಸ್ಟ್ ಮಾಡಿರುವ ಅವರು, 75ನೇ ವರ್ಷದ ಸ್ವಾತಂತ್ರ್ಯೋತ್ಸವ ಬಡವರಿಗೆ ಹೊರೆಯಾಗುತ್ತಿರುವುದು ದುರಾದೃಷ್ಟ ಎಂದಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ 20ರೂ.ಗೆ ರಾಷ್ಟ್ರಧ್ವಜವನ್ನು ಮಾರಾಟ ಮಾಡಲಾಗುತ್ತಿದೆ.ಧ್ವಜ ಖರೀದಿ ಮಾಡದೇ ಇರುವವರಿಗೆ ಪಡಿತರ ನೀಡುವುದಿಲ್ಲ ಎಂದು ಅಂಗಡಿಯವನು ಹೇಳಿಕೆ […]

ಸಿದ್ದರಾಮೋತ್ಸವದ ಯಶಸ್ಸಿನ ನಂತರ ತಿರಂಗ ಯಾತ್ರೆಗೆ ಕಾಂಗ್ರೆಸ್ ತಯಾರಿ

ನವದೆಹಲಿ, ಆ.6- ಸಿದ್ದರಾಮೋತ್ಸವದ ಅಭೂತಪೂರ್ವ ಯಶಸ್ಸಿನ ಬಳಿಕ ಕಾಂಗ್ರೆಸ್ ತಿರಂಗ ಯಾತ್ರೆಗೆ ಚಾಲನೆ ನೀಡಿದ್ದು, ಆಗಸ್ಟ್ 15ರಂದು ಬೆಂಗಳೂರಿನಲ್ಲಿ ಸುಮಾರು ಒಂದು ಲಕ್ಷ ಮಂದಿ ಸಮಾವೇಶಗೊಂಡು ಪಾದಯಾತ್ರೆ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಯಿಂದ ನಗರದ ಮೆಜೆಸ್ಟಿಕ್‍ನಲ್ಲಿರುವ ಸಂಗೋಳ್ಳಿ ರಾಯಣ್ಣ ಪ್ರತಿಮೆಯಿಂದ ಸ್ವಾತಂತ್ರ್ಯ ನಡಿಗೆ ಆರಂಭಗೊಂಡು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶಗೊಳ್ಳಲಿದೆ. ಸುಮಾರು ಒಂದು ಲಕ್ಷ ಮಂದಿ ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರಷ್ಟೆ ಅಲ್ಲದೆ ಸ್ವಯಂ ಸೇವಾಸಂಸ್ಥೆಗಳು, ಚಲನಚಿತ್ರರಂಗ, ಸಾಂಸ್ಕøತಿಕ ಕ್ಷೇತ್ರದಲ್ಲಿರುವವರು, ಸಾಹಿತಿಗಳು, […]

ಸೋಶಿಯಲ್ ಮೀಡಿಯಾ ಖಾತೆಗಳ ಪ್ರೊಫೈಲ್‍ಗೆ ರಾಷ್ಟ್ರಧ್ವಜ ಹಾಕಲು ಪ್ರಧಾನಿ ಕರೆ

ನವದೆಹಲಿ,ಜು.17- ಅಜಾದಿ ಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ಆ.2ರಿಂದ 15ರ ನಡುವೆ ದೇಶದ ಪ್ರತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿನ ತಮ್ಮ ಖಾತೆಗಳ ಪ್ರೊಫೈಲ್‍ಗೆ ತ್ರಿವರ್ಣ ಧ್ವಜ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್‍ನ 91ನೇ ಸರಣಿಯಲ್ಲಿ ಮಾತನಾಡಿದ ಅವರು, ಭಾರತ ಐತಿಹಾಸಿಕ ಮತ್ತು ಶ್ರೀಮಂತ ಪರಂಪರೆಯ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷ ಅಭಿಯಾನ ಕೂಡ ನಡೆಯುತ್ತಿದೆ. […]