ವಯ್ಯಾಲಿಕಾವಲ್ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ, ಭಕ್ತರಿಗೆ ವಿಶೇಷ ವ್ಯವಸ್ಥೆ

ಬೆಂಗಳೂರು, ಡಿ.17- ಹೊಸ ವರ್ಷದಂದೇ ವೈಕುಂಠ ಏಕಾದಶಿ ಬಂದಿರುವುದರಿಂದ ಈ ಬಾರಿ ವಯ್ಯಾಲಿ ಕಾವಲ್ನಲ್ಲಿರುವ ಟಿಟಿಡಿ ವೆಂಕಟೇಶ್ವರ ದೇವಸ್ಥಾನದಲ್ಲಿ ಎರಡು ದಿನಗಳ ಕಾಲ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ವಯ್ಯಾಲಿ ಕಾವಲ್ನ ಟಿಟಿಡಿ ಅಧ್ಯಕ್ಷ ಡಾ.ಸಂಪತ್ ರವಿ ನಾರಾಯಣನ್, ಜನವರಿ 1ರಂದು ಬೆಳಗ್ಗೆ 6 ಗಂಟೆಯಿಂದಲೇ ಭಕ್ತರಿಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಇದಕ್ಕಾಗಿ ಮೂರು ವಿಶೇಷ ಕೌಂಟರ್ಗಳನ್ನು ಕೂಡ ತೆರೆಯಲಾಗಿದೆ ಎಂದು ತಿಳಿಸಿದರು. ಈ ಬಾರಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಭೇಟಿ […]