ಇಂದು ಬಿಜೆಪಿ ಮಹತ್ವದ ಶಾಸಕಾಂಗ ಸಭೆ

ಬೆಂಗಳೂರು, ಫೆ.15- ಬಜೆಟ್ ಅವೇಶನದಲ್ಲಿ ಪ್ರತಿಪಕ್ಷಗಳ ಅಸ್ತ್ರಕ್ಕೆ ಪ್ರತಿತಂತ್ರ ರೂಪಿಸಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ಇಂದು ಸಂಜೆ ನಗರದ ಖಾಸಗಿ ಹೊಟೇಲ್‍ನಲ್ಲಿ ಮಹತ್ವದ ಶಾಸಕಾಂಗ ಸಭೆ ಕರೆಯಲಾಗಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಪಕ್ಷದ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರು, ಶಾಸಕರು ಶಾಸಕಾಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಶುಕ್ರವಾರ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದಾರೆ.ಬಜೆಟ್ ಮಂಡನೆಗೆ ಮುನ್ನ ದಿ ಕ್ಯಾಪಿಟಲ್ ಹೊಟೇಲ್‍ನಲ್ಲಿ ಸಂಜೆ 7 ಗಂಟೆಗೆ […]