ತಿರುಪತಿ ದೇವಸ್ಥಾನದಲ್ಲಿ ದರ್ಶನ ನಿಯಮಗಳ ಬದಲಾವಣೆ

ಅಮರಾವತಿ, ಅ.30- ನವೆಂಬರ್ ತಿಂಗಳಿನಿಂದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ದರ್ಶನದ ನಿಯಮಗಳಲ್ಲಿ ಬದಲಾವಣೆಯಾಗಿದೆ. ತಿರುಪತಿ ವೆಂಕಟೇಶ್ವರನ ವಿಐಪಿ ದರ್ಶನದ ನಿಯಮದಲ್ಲಿ ಬದಲಾವಣೆ ತಂದಿದ್ದು, ವಿಐಪಿ ದರ್ಶನ ಮತ್ತು ಸಾಮಾನ್ಯ ದರ್ಶನದ ಸಮಯ ಒಂದೇ ಆಗಿದ್ದರಿಂದ ಭಕ್ತರಿಗೆ ತೊಂದರೆ ಆಗುತ್ತಿತ್ತು. ಉಚಿತ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಮಾಡಿಕೊಡಲು ಈ ಬದಲಾವಣೆ ಮಾಡಲಾಗುತ್ತಿದೆ ಎಂದು ಟಿಟಿಡಿ ತಿಳಿಸಿದೆ. ನವೆಂಬರ್ 1ರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ವಿಐಪಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಸ್ತುತ ಮುಂಜಾನೆ 2.30ರಿಂದ […]