BREAKING: ನಾಳೆ ಕಾಂಗ್ರೆಸ್ ಕಲಿಗಳ ಮೊದಲ ಪಟ್ಟಿ ಬಿಡುಗಡೆ..?

ಬೆಂಗಳೂರು,ಮಾ.21- ಹಲವು ಜನಪರ ಯೋಜನೆಗಳ ಭರವಸೆ ಮೂಲಕ ಜನೋತ್ಸಾಹದಲ್ಲಿರುವ ಕಾಂಗ್ರೆಸ್ ನಾಳೆ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಮೂಲಕ ಚುನಾವಣಾ ರಣಾಂಗಣಕ್ಕೆ ಭಾರೀ ವೇಗದಲ್ಲಿ ಪ್ರವೇಶ ಪಡೆಯಲು ಮುಂದಾಗಿದೆ. ಕಳೆದ ಮೂರು ತಿಂಗಳಿನಿಂದ ಹಲವು ಸುತ್ತಿನ ಕಸರತ್ತನ್ನು ನಡೆಸಿರುವ ಕಾಂಗ್ರೆಸ್ ಪಂಚಾಯತ್ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿದೆ. ಕ್ಷೇತ್ರ ಹಾಗೂ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯಗಳನ್ನು ಕ್ರೋಢಿಕರಿಸಿದೆ. ರಾಜ್ಯ ಮಟ್ಟದಲ್ಲಿ ಚುನಾವಣಾ ಸಮಿತಿ, ರಾಷ್ಟ್ರೀಯ ಮಟ್ಟದ ಟಿಕೆಟ್ ಪರಿಶೀಲನಾ ಸಮಿತಿಗಳು 13ಕ್ಕೂ ಹೆಚ್ಚು ಸಭೆಗಳನ್ನು ನಡೆಸಿವೆ. […]

ನಾಳೆ ಕುಂದಾನಗರಿಗೆ ಮೋದಿ, ಬಿಜೆಪಿಯಲ್ಲಿ ಸಂಚಲನ

ಬೆಂಗಳೂರು,ಫೆ.26- ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿ ರುವ ಬೆನ್ನಲ್ಲೇ ನಾಳೆ ಪ್ರಧಾನಿ ಮೋದಿ ಅವರು ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು,ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿಯವರ ಆಗಮನ ಆಡಳಿತಾರೂಢ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ಇದು ಸರ್ಕಾರಿ ಕಾರ್ಯಕ್ರಮ ಎಂದೇ ಹೇಳಲಾಗುತ್ತಿದ್ದರೂ ಹೊರನೋಟದಲ್ಲಿ ಬಿಜೆಪಿಯ ಪ್ರಚಾರ ಎಂದೇ ಬಿಂಬಿತವಾಗಿದೆ.ನಾಳೆ ಬೆಳಗ್ಗೆ ನವದೆಹಲಿಗೆ 9 ಗಂಟೆಗೆ ಹೊರಡಲಿರುವ ಮೋದಿ ಅವರು 11.30ಕ್ಕೆ ಶಿವಮೊಗ್ಗಕ್ಕೆ ಆಗಮಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ […]

ನಾಳೆಯಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಮುಷ್ಕರ

ಬೆಂಗಳೂರು,ಜ.31- ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು ಹಾಗೂ ನೀರು ಸರಬರಾಜು ಸಹಾಯಕರು ಉದ್ಯೋಗ ಖಾಯಂಗೊಳಿಸಲು ಒತ್ತಾಯಿಸಿ ನಾಳೆಯಿಂದ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವ ಧರಣಿ ಕೈಗೊಳ್ಳಲು ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ರಾಜಾ್ಯಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಪೌರಕಾರ್ಮಿಕರನ್ನು ಕಾಯಂಗೊಳಿಸಲು ಮುಂದಾಗಿರುವ ಸರ್ಕಾರ, ಕಸ ವಿಲೇವಾರಿ ವಾಹನ ಚಾಲಕರು, ಸಹಾಯಕರು, ನೀರು ಪೂರೈಕೆದಾರರನ್ನು […]