ಗರೀಬ್ ಕಲ್ಯಾಣ್ ಯೋಜನೆಗೆ ಬೇಕು 108 ಮಿಲಿಯನ್ ಟನ್ ಆಹಾರ

ಹೈದರಾಬಾದ್, ಅ.29- ದೇಶದ 80 ಕೋಟಿ ಜನರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಪ್ರತಿ ತಿಂಗಳು ನೀಡುವ 10 ಕೆಜಿ ಅಕ್ಕಿ ಅಥವಾ ಗೋಧಿಗಾಗಿ ಪ್ರತಿ ವರ್ಷ 108 ಮಿಲಿಯನ್ ಟನ್ ಆಹಾರ ಧಾನ್ಯಗಳ ಅಗತ್ಯವಿದೆ ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಫೆಡರೇಶನ್‍ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅಕಾಲಿಕ ಮಳೆಯಿಂದಾಗಿ ಆಹಾರ ಧಾನ್ಯಗಳ ಉತ್ಪಾದನೆ ಕಡಿಮೆಯಾಗಬಹುದು […]