ಮಾಸಾಂತ್ಯಕ್ಕೆ ಸಿಎಂ ದೆಹಲಿಗೆ, ಮತ್ತೆ ಗರಿಗೆದರಿದ ಚಟುವಟಿಕೆ

ಬೆಂಗಳೂರು,ನ.25- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ 29ರಂದು ನವದೆಹಲಿಗೆ ತೆರಳುತ್ತಿದ್ದು, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ವರಿಷ್ಠರ ಜೊತೆ ಚರ್ಚಿಸಲಿದ್ದಾರೆ. ಬಹುದಿನಗಳ ನಂತರ ನವದೆಹಲಿಗೆ ಸಿಎಂ ತೆರಳುತ್ತಿರುವುದರಿಂದ ಸಹಜವಾಗಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದ್ದು, ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗುವ […]

ಮತದಾರರಿಗೆ ತೀರ್ಥಯಾತ್ರೆ, ಪ್ರವಾಸ, ಭರ್ಜರಿ ಉಡುಗೊರೆಗಳ ಭಾಗ್ಯ

ಬೆಂಗಳೂರು,ನ.25-ರಾಜ್ಯ ವಿಧಾನಸಭೆಗೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆ ಮತದಾರರ ಮೂಗಿಗೆ ತುಪ್ಪ ಸವರಲು ಆಕಾಂಕ್ಷಿಗಳು ನಾನಾ ರೀತಿಯ ಆಮಿಷಗಳನ್ನೊಡುತ್ತಿದ್ದಾರೆ. ಹಾಲಿ ಸಚಿವರು, ಶಾಸಕರು ಹಾಗೂ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ಖಾತ್ರಿಯಲ್ಲಿರುವ ಆಕಾಂಕ್ಷಿಗಳು ಮತದಾರರಿಗೆ ಉಚಿತವಾಗಿ ಉಡುಗೊರೆ ತೀರ್ಥಯಾತ್ರೆ, ಪ್ರವಾಸ, ಕ್ರೀಡಾಕೂಟಗಳ ಆಯೋಜನೆ, ರಸಮಂಜರಿ ಕಾರ್ಯಕ್ರಮ, ಹಬ್ಬಹರಿದಿನಗಳಲ್ಲಿ ಯಥೇಚ್ಚವಾಗಿ ಹಣ ನೀಡುವುದು ಸೇರಿದಂತೆ ನಾನಾ ರೀತಿಯ ಭರವಸೆಗಳನ್ನು ನೀಡುತ್ತಿದ್ದಾರೆ. ಇನ್ನೇನು ಚುನಾವಣೆ ಸಮೀಪಿಸುತ್ತಿರುವುದರಿಂದ ಬಹುತೇಕ 224 ಕ್ಷೇತ್ರಗಳಲ್ಲಿ ಮತದಾರರಿಗೆ ಆಮಿಷವೊಡ್ಡುವ ದೃಶ್ಯಗಳು ಸರ್ವೇ ಸಾಮಾನ್ಯವಾಗಿದ್ದು, […]

ಭಾರತ ತಂಡದ ‘ಸೂಪರ್ ಸ್ಟಾರ್’ಗಳ ಬಗ್ಗೆ ಎಚ್ಚರವಹಿಸಿ

ನವದೆಹಲಿ, ನ. 16- ಟಿ 20 ವಿಶ್ವಕಪ್ ನಂತರ ಸೆಮಿಫೈನಲ್ ಸೋತು ಪ್ರಶಸ್ತಿ ಕೈಚೆಲ್ಲಿರುವ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡಗಳು ಈಗ ಟ್ವೆಂಟಿ-20 , ಏಕದಿನ ಸರಣಿಗಳನ್ನು ಆಡಲು ಸಜ್ಜಾಗಿದೆ. ಸರಣಿಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್, ಭಾರತ ತಂಡವು ಟಿ-20 ಮುಕುಟ ಗೆಲ್ಲುವಲ್ಲಿ ಎಡವಿದ್ದರೂ ಕೂಡ ಆ ತಂಡದಲ್ಲಿ ಸೂಪರ್ ಸ್ಟಾರ್ಗಳ ದಂಡೇ ಇರುವುದರಿಂದ ನಾವು ಅವರನ್ನು ಲಘುವಾಗಿ ಪರಿಗಣಿಸುವುದಿಲ್ಲ’ ಎಂದು ಹೇಳಿದ್ದಾರೆ. ಟೀಂ ಇಂಡಿಯಾವು ಕಳೆದೆರಡು ವರ್ಷಗಳಿಂದ ಟಿ 20 […]

ಶಾಲಾ ಮಕ್ಕಳಿಗೆ ‘ಪ್ರವಾಸ ಭಾಗ್ಯ’ ಮತ್ತೆ ಪ್ರಾರಂಭ

ಬೆಂಗಳೂರು,ನ.16- ರಾಜ್ಯದ ನೆಲಜಲ, ಇತಿಹಾಸವನ್ನು ತಿಳಿಯುವ ಸದುದ್ದೇಶದಿಂದ ಹಿಂದಿನ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಮತ್ತೆ ಪ್ರಾರಂಭವಾಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದತಾತ್ಕಾಲಿಕವಾಗಿ ರದ್ದುಗೊಂಡಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಪ್ರಾರಂಭವಾಗಲಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ ತಿಂಗಳ ಅಂತ್ಯದೊಳಗೆ ಶಾಲಾ ಮಕ್ಕಳನ್ನು ಪ್ರೇಕ್ಷಣೀಯ ಸ್ಥಳಗಳಿಗೆ ಕರೆದೊಯ್ಯುವ ಶಾಲಾ ಪ್ರವಾಸ ಭಾಗ್ಯವನ್ನು ಪ್ರಾರಂಭಿಸಬೇಕು, ಜನವರಿ […]

ಭಾರತದ ಸರಣಿಗೆ ಕಿವೀಸ್ ತಂಡ ಪ್ರಕಟ

ನವದೆಹಲಿ, ನ. 15- ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಟಿ 20 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಸೋತು ಪ್ರಶಸ್ತಿ ಆಸೆ ಕೈಚೆಲ್ಲಿದ್ದ ನ್ಯೂಜಿಲ್ಯಾಂಡ್ ತಂಡವು ಭಾರತದ ವಿರುದ್ಧದ ಏಕದಿನ ಹಾಗೂ ಟಿ 20 ಸರಣಿಗೆ 15 ಸದಸ್ಯರ ತಂಡವನ್ನು ಇಂದು ಪ್ರಕಟಿಸಿದೆ. ತಂಡದ ಹಿರಿಯ ಆಟಗಾರರಾದ ಮಾರ್ಟಿನ್ ಗುಪ್ಟಿಲ್ ಹಾಗೂ ಟ್ರೆಂಟ್ ಬೌಲ್ಟ್ ಅವರು ತಂಡದಿಂದ ಹೊರಗಿಡಲಾಗಿದೆ. ನವೆಂಬರ್ 18 ರಿಂದ ಮೆನ್ ಇನ್ ಬ್ಲೂ ವಿರುದ್ಧ ನ್ಯೂಜಿಲ್ಯಾಂಡ್ ತಂಡವು 3 ಏಕದಿನ ಹಾಗೂ 3 ಟ್ವೆಂಟಿ 20 ಪಂದ್ಯವನ್ನು […]

ನಾಳೆಯಿಂದ ರಾಜ್ಯದಾದ್ಯಂತ ಬೊಮ್ಮಾಯಿ, ಬಿಎಸ್ವೈ ಸಂಘಟನಾ ಪ್ರವಾಸ

ಬೆಂಗಳೂರು,ಅ.10- ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಆಡಳಿತರೂಢಾ ಬಿಜೆಪಿ, ನಾಳೆಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಸಂಘಟನಾ ಪ್ರವಾಸ ನಡೆಸುವ ವಿಜಯಿ ಸಂಕಲ್ಪ ಯಾತ್ರೆಯ ಮೂಲಕ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ. ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ ಹೂಡುತ್ತಿದೆ. ಈ ನಿಟ್ಟಿನಲ್ಲಿ 140 ಕ್ಷೇತ್ರದಲ್ಲಿ ರಾಜ್ಯ ನಾಯಕರ ಪ್ರವಾಸ ಹಾಗೂ ಏಳು ಬೃಹತ್ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಿದೆ. ಈ ಮೂಲಕ ಚುನಾವಣೆಗೆ […]

ಸದ್ಯದಲ್ಲೇ ಸಿಎಂ ದೆಹಲಿ ಪ್ರವಾಸ, ಗರಿಗೆದರಿದ ಚಟುವಟಿಕೆ

ಬೆಂಗಳೂರು,ಅ.3- ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಸದ್ಯದಲ್ಲೇ ದೆಹಲಿ ಪ್ರವಾಸ ಕೈಗೊಳ್ಳುತ್ತಾರೆಂಬ ವಿಚಾರ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ರಾಜಕೀಯ ಚಟುವಟಿಕೆ ಗರಿಗೆ ದರುವಂತೆ ಮಾಡಿದೆ. ಮುಖ್ಯಮಂತ್ರಿಗಳು ಅಧಿಕೃತವಾಗಿ ರಾಜ್ಯದ ಯೋಜನೆಗಳ ಕುರಿತು ಚರ್ಚಿಸಲು ಕೇಂದ್ರ ಸಚಿವರ ಭೇಟಿಗೆ ತೆರಳುತ್ತಿದ್ದರೂ, ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಉದ್ದೇಶ ಹೊಂದಿದ್ದಾರೆ. ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಮುಕ್ತಾಯವಾಗಿರು ವುದರಿಂದ ಸಚಿವಾಕಾಂಕ್ಷಿಗಳ ಬಹುದಿನಗಳ ಬೇಡಿಕೆಗೆ ಈ ಬಾರಿಯಾದರೂ ಪಕ್ಷದ ಹೈಕಮಾಂಡ್‍ನಿಂದ ಗ್ರೀನ್ ಸಿಗ್ನಲ್ ಸಿಗುತ್ತದೆ […]

ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳಿಗೆ ಉಚಿತ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸ

ಬೆಂಗಳೂರು,ಸೆ.18-ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸೀಮಿತ ಸಂಖ್ಯೆ ವಿದ್ಯಾರ್ಥಿಗಳಿಗೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಕರ್ನಾಟಕ ದರ್ಶನ ಎಂಬ ಉಚಿತ ಶೈಕ್ಷಣಿಕ ಪ್ರವಾಸವನ್ನು ಸರ್ಕಾರ ಆಯೋಜಿಸಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ ಈ ಪ್ರವಾಸವನ್ನು ಆಯೋಜಿಸಲಾಗಿದ್ದು, 2022-23 ನೇ ಸಾಲಿನ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ […]

ರಾಜ್ಯ ಪ್ರವಾಸಕ್ಕೆ ಬಿಜೆಪಿ ಸಿದ್ಧತೆ, ಪ್ರಚಾರದ ಅಖಾಡಕ್ಕೆ ಕೇಂದ್ರ ನಾಯಕರು

ಬೆಂಗಳೂರು,ಆ.25- ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ, ಎರಡು ತಂಡಗಳಲ್ಲಿ ರಾಜ್ಯ ಪ್ರವಾಸಕ್ಕೆ ಸನ್ನದ್ಧವಾಗಿದ್ದು, ಸೆಪ್ಟೆಂಬರ್ 8ರಂದು ಪ್ರವಾಸದ ಮಾರ್ಗ ಅಂತಿಮಗೊಳ್ಳಲಿದೆ. ಟಾರ್ಗೆಟ್ 150 ಗುರಿ ತಲುಪಲು ಪೂರಕವಾಗಿ ಸಂಘಟನಾತ್ಮಕವಾಗಿ ಪ್ರವಾಸ ಆರಂಭಿಸಲಿದ್ದು, ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಯಾವುದೇ ತಂಡದ ನೇತೃತ್ವ ನೀಡಿಲ್ಲ. ಆದರೆ ಪ್ರವಾಸದಲ್ಲಿ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಸೆಪ್ಟಂಬರ್ 11ರಂದು ರಾಜ್ಯ ಕಾರ್ಯಕಾರಿಣಿ ಸಭೆ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿ ಚುನಾವಣಾ ಸಿದ್ಧತೆ ಅಖಾಡಕ್ಕೆ ಧುಮುಕಲಿದೆ. ಮೊದಲ […]

ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಸಂಪುಟ ವಿಸ್ತರಣೆ ಮುನ್ನೆಲೆಗೆ

ಬೆಂಗಳೂರು,ಜು.24- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಗೆ ತೆರಳಿದ್ದು, ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ಪುನಾರಚನೆ/ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಸಂಬಂಧ ಪಕ್ಷದ ಮುಖಂಡರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ನಾಳೆ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕಾರ ಸ್ವೀಕರಿಸಲಿದ್ದು, ಬಿಜೆಪಿ ಸೇರಿದಂತೆ ಎನ್‍ಡಿಎ ಮೈತ್ರಿಕೂಟ ಆಡಳಿತವಿರುವ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಬೇಕೆಂದು ಹೈಕಮಾಂಡ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ಮೂರು ದಿನಗಳ ಕಾಲ […]