ಶ್ರೀರಾಮದೇವರ ಬೆಟ್ಟ ಅಭಿವೃದ್ಧಿ ಪಡಿಸಲು ಮುಂದಾದ ಸರ್ಕಾರ

ಬೆಂಗಳೂರು,ಡಿ.14-ರಾಮನಗರ ಜಿಲ್ಲೆಯಲ್ಲಿರುವ ಪೌರಾಣಿಕ ಹಿನ್ನೆಲೆಯುಳ್ಳ ಶ್ರೀರಾಮದೇವರ ಬೆಟ್ಟವನ್ನು ಪವಿತ್ರ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಮದೇವರ ಬೆಟ್ಟದ ಮೇಲಿರುವ ಶ್ರೀರಾಮ ದೇವಾಲಯವನ್ನು ಜೀರ್ಣೋದ್ಧಾರ ಮಾಡುವುದರ ಜೊತೆಗೆ ರಾಮಜನ್ಮ ಭೂಮಿ ಅಯೋಧ್ಯೆ ಹಾಗೂ ಈ ಬೆಟ್ಟದ ನಡುವೆ ಅವಿನಾಭಾವ ಸಂಬಂಧ ಕಲ್ಪಿಸಲಾಗುತ್ತಿದೆ. ಆ ಮೂಲಕ ಅಗತ್ಯ ಮೂಲಸೌಲಭ್ಯ ಒದಗಿಸಿ ಪವಿತ್ರ ಯಾತ್ರಾ ಸ್ಥಳವಾಗಿ ರೂಪಿಸುವ ಉದ್ದೇಶ ಸರ್ಕಾರಕ್ಕಿದೆ. ರಾಮನಗರದಿಂದ ಬೆಳ್ಳಿ ಇಟ್ಟಿಗೆ, ಸ್ಥಳೀಯ ರೇಷ್ಮೆ ಸೀರೆ ಮತ್ತು ಶಲ್ಯವನ್ನು ಕಾಣಿಕೆಯಾಗಿ […]

ಪ್ರವಾಸಿ ಗೈಡ್‍ಗಳ ಮಾಸಿಕ ವೇತನ 5000 ರೂ.ಗೆ ಹೆಚ್ಚಳ

ಬೆಂಗಳೂರು,ಸೆ.28- ರಾಜ್ಯದ ಪ್ರವಾಸೋದ್ಯಮ ತಾಣಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಪ್ರಚುರಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಗೈಡ್‍ಗಳಿಗೆ ನೀಡಲಾಗುತ್ತಿರುವ ಮಾಸಿಕ ವೇತನವನ್ನು 2000 ರೂ.ನಿಂದ 5000 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೈಡ್‍ಗಳಿಗೆ ಈವರೆಗೂ ತಿಂಗಳಿಗೆ 2000 ರೂ. ವೇತನವನ್ನು ನೀಡಲಾಗುತ್ತಿತ್ತು. ಅದನ್ನು 5 ಸಾವಿರಕ್ಕೆ ಹೆಚ್ಚಳ ಮಾಡು ವುದಾಗಿ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿತ್ತು. ಆದಷ್ಟು ಶೀಘ್ರ […]

ಪ್ರವಾಸಿ ತಾಣಗಳಾಗಲಿವೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ರಾಜ್ಯದ ಸ್ಥಳಗಳ

ಬೆಂಗಳೂರು, ಜ.27- ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಮಹತ್ವ ಸಾರಲು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಹೋರಾಟದಲ್ಲಿ ಕೊಡುಗೆ ನೀಡಿದ ರಾಜ್ಯದ ಸ್ಥಳಗಳನ್ನು ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭ ದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಸ್ಥಳಗಳ ಕುರಿತು ಮಾಹಿತಿ ಕಲೆ ಹಾಕುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಸಾರ್ವಜನಿಕ ಸಹಭಾಗಿತ್ವ ಕೋರಲಾಗುತ್ತಿದ್ದು, ಜನರು ತಮಗೆ ತಿಳಿದ ಸ್ಥಳಗಳ ಕುರಿತ ಮಾಹಿತಿಗಳನ್ನು ಇಲಾಖೆಯೊಂದಿಗೆ ಹಂಚಿಕೊಳ್ಳಬಹುದಾಗಿದೆ ಎಂದು ಪ್ರವಾ […]