ಟೋಯಿಂಗ್ ನಿಯಮ ಪಾಲಿಸದ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ; ಕಮಲ್‍ಪಂಥ್ ಎಚ್ಚರಿಕೆ
ಬೆಂಗಳೂರು,ಜ.31- ಟೋಯಿಂಗ್ ನಿಯಮಗಳನ್ನು ಪಾಲಿಸದ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೋಯಿಂಗ್ ಸಿಬ್ಬಂದಿ ವರ್ತನೆ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ, ಅಸಮಾಧಾನ ವ್ಯಕ್ತವಾಗಿದೆ. ಯಾವ ಯಾವ ಸ್ಥಳಗಳಲ್ಲಿ ಘಟನೆ ನಡೆದಿದೆಯೋ ಆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಮೊನ್ನೆ ನಡೆದ ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಿಬ್ಬಂದಿ ಎಲ್ಲೆಲ್ಲಿ ದುವರ್ತನೆ ತೋರಿದ್ದಾರೊ ಅದರ ಬಗ್ಗೆ ಹಿರಿಯ ಅಧಿಕಾರಿಗಳು ಕ್ರಮ […]