ಸಾರ್ವಜನಿಕರಿಗೆ ತೊಂದರೆಯಾಗದಂತೆ ಟೋಯಿಂಗ್ ವ್ಯವಸ್ಥೆ ಜಾರಿ : ಸಿಎಂ

ಬೆಂಗಳೂರು,ಜ.31- ಸಾರ್ವಜನಿಕರು ಹಾಗೂ ಸವಾರರಿಗೆ ತೊಂದರೆಯಾಗದಂತೆ ಟೋಯಿಂಗ್ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಸಂಚಾರಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಯಾರಿಗೂ ಕೂಡ ತೊಂದರೆಯಾಗದಂತೆ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಟೋಯಿಂಗ್ ವ್ಯವಸ್ಥೆಯಲ್ಲಿ ಯಾವೆಲ್ಲ ಬದಲಾವಣೆ ಮಾಡಬೇಕು, ನಿಯಮಗಳನ್ನು ಉಲ್ಲಂಘಿಸಿದಾಗ ಸಾರ್ವಜನಿಕರು […]