ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲ್ಲ : ಆರಗ ಜ್ಞಾನೇಂದ್ರ ಸ್ಪಷ್ಟನೆ

ಬೆಂಗಳೂರು,ಸೆ.17- ನಗರದಲ್ಲಿ ಸ್ಥಗಿತ ಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ […]