ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಬಾರಿ ಪ್ರತಿಭಟನೆ

ಬೆಂಗಳೂರು,ಫೆ.9- ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಟ್ರಾಕ್ಟರ್‍ಗಳ ಸಮೇತ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ನೂರಾರು ಟ್ರಾಕ್ಟರ್ ಚಾಲಕರು ಹಾಗೂ ಮಾಲೀಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ಈ ನಿರ್ಧಾರ ಖಂಡಿಸಿ ಕಳೆದ ರಾತ್ರಿಯೇ ರಾಜ್ಯದ ನಾನಾ ಮೂಲೆಗಳಿಂದ ನೂರಾರು ಟ್ರಾಕ್ಟರ್‍ಗಳು ನಗರ ಪ್ರವೇಶಿಸಲು ಮುಂದಾದವು . ಆದರೆ, ಪೊಲೀಸರು ಟ್ರಾಕ್ಟರ್‍ಗಳ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಚಾಲಕರು ಸ್ಥಳದಲ್ಲೇ ಟ್ರಾಕ್ಟರ್ ನಿಲ್ಲಿಸಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ […]

ಟ್ರ್ಯಾಕ್ಟರ್‌ಗೆ ಕ್ರೂಸರ್ ಡಿಕ್ಕಿ, ದಂಪತಿ ಸಾವು

ವಿಜಯಪುರ, ಅ.27- ಕಬ್ಬು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್‍ಗೆ ಹಿಂಬದಿಯಿಂದ ಬಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳ್‍ಖೇಡ್ ಬಳಿಯ ಎನ್‍ಎಚ್-50ರಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಬಯ್ಯಾಜಿ ಶಿಂಧೆ (50) ಹಾಗೂ ಅವರ ಪತ್ನಿ ಸುಮಿತ್ರಾ ಶಿಂಧೆ (40) ಮೃತಪಟ್ಟ ದಂಪತಿ. ಘಟನೆಯಲ್ಲಿ 9 ಜನರಿಗೆ ಗಾಯಗಳಾಗಿದ್ದು, ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಟಿ ಕಂಠ ಗಾಯನ : 1 […]

ಪ್ರತ್ಯೇಕ ಅಪಘಾತ : ಉತ್ತರಪ್ರದೇಶದಲ್ಲಿ 39 ಮಂದಿ ಸಾವು

ಕಾನ್ಪುರ,ಅ.2- ಕಳೆದ 24 ಗಂಟೆಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ 39 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಎರಡು ಅಪಘಾತಗಳಿಂದ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 27 ಮಂದಿ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೆರೆಗೆ ಬಿದ್ದದ್ದರಿಂದ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳೇ ಆಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕಾನ್ಪುರದ ಅಹಿರವಾನ್ […]

ಟ್ರ್ಯಾಕ್ಟರ್ ಟ್ರಾಲಿಗೆ ಕಾರು ಡಿಕ್ಕಿ, ನಾಲ್ವರ ದುರ್ಮರಣ, 13 ಮಂದಿ ಸ್ಥಿತಿ ಗಂಭೀರ

ಲಖ್ನೋ,ಆ.23-ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 13 ಜನರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ಶಿವಾನಿ(18)ಮತ್ತು ಚಾಲಕ ಸಾರ್ಥಕ್ ಭಾರದ್ವಾಜ್(25) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಟ್ರಾಕ್ಟರ್‍ನ ಟ್ರಾಲಿಯೊಳಗೆ ಸಿಲುಕಿದ್ದ ಪ್ರಯಾಣಿಕರಾದ ಸಾವಿತ್ರಿ ದೇವಿ(50) ಮತ್ತು ಜ್ಞಾನವತಿ( 47) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ಲಕ್ನೋದಿಂದ ಸುಮಾರು 700 ಕಿಮೀ ದೂರದಲ್ಲಿರುವ ಸಹರಾನ್‍ಪುರ ಜಿಲ್ಲೆಯ ದಿಯೋಬಂದ್ ಪ್ರದೇಶದಲ್ಲಿರುವ ರೋಹನಾ ಟೋಲ್ ಪ್ಲಾಜಾ ಬಳಿಯ ಮುಜಾಫರ್‍ನಗರ-ಸಹಾರನ್‍ಪುರ ಹೆದ್ದಾರಿಯಲ್ಲಿ ತಡರಾತ್ರಿ ಈ […]