ಕೆಆರ್ ಮಾರುಕಟ್ಟೆ ಸ್ಥಳಾಂತರಕ್ಕೆ ವ್ಯಾಪಾರಿಗಳ ಅಸಮಾಧಾನ

ಬೆಂಗಳೂರು,ಜ.12- ನಗರದಲ್ಲಿ ಕೊರೊನಾ ಸೋಂಕು ಉಲ್ಬಣ ಗೊಳ್ಳುತ್ತಿರುವುದರಿಂದ ಅತಿ ಜನಸಂದಣಿ ಪ್ರದೇಶವಾಗಿರುವ ಕೆ.ಆರ್. ಮಾರುಕಟ್ಟೆಯನ್ನು ಹೊರ ವಲಯಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಾರಿ ಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೆ ನಾವು ಎರಡು ವರ್ಷಗಳಿಂದ ಸರಿಯಾಗಿ ವ್ಯಾಪಾರ ಮಾಡದೆ ಜೀವನ ನಡೆಸುವುದೇ ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆ ಶಿಫ್ಟ್ ಮಾಡಿದರೆ ನಮ್ಮ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಹೀಗಾಗಿ ಕೂಡಲೇ ಈ ನಿರ್ಧಾರವನ್ನು ಕೈಬಿಡಿ ಎಂದು ವ್ಯಾಪಾರಿಗಳು ಒತ್ತಾಯಿಸಿದ್ದಾರೆ. ರಾಜಕೀಯ ವ್ಯಕ್ತಿಗಳಿಗೆ ಒಂದು ನ್ಯಾಯ ನಮಗೆ ಮತ್ತೊಂದು […]