ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಅಳವಡಿಸಿದ್ದ ಬ್ಯಾಟರಿಗಳ ಕಳವು ಮಾಡುತ್ತಿದ್ದ ದಂಪತಿ ಬಂಧನ..
ಬೆಂಗಳೂರು : ಸುಲಭವಾಗಿ ಹಣ ಸಂಪಾದನೆ ಮಾಡಿ ಮೋಜಿನ ಜೀವನ ನಡೆಸುವ ಸಲುವಾಗಿ ರಾತ್ರಿ ವೇಳೆ ನಗರದ ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ದಂಪತಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 68 ಪ್ರಕರಣಗಳನ್ನು ಪತ್ತೆಹಚ್ಚಿ 20 ಲಕ್ಷ ರೂ. ಬೆಲೆಯ 230 ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿನ ಟ್ರಾಫಿಕ್ ಸಿಗ್ನಲ್‍ನಲ್ಲಿ ಅಳವಡಿಸಿದ್ದ ಸಿಗ್ನಲ್‍ಲೈಟ್ ಮತ್ತು ಸಿಸಿಟಿವಿ ಕ್ಯಾಮೆರಾ ಬ್ಯಾಟರಿಗಳು ಕಳವಾಗುತ್ತಿದ್ದ ಬಗ್ಗೆ ಕೇಂದ್ರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡ […]