ಸರಕಾರಿ ಪದವಿ ಕಾಲೇಜುಗಳಿಗೆ ಪ್ರಭಾರಿ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಪ್ರಭಾರಿ ಪ್ರಾಂಶುಪಾಲರಾಗಿ ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಹುದ್ದೆಗಳಲ್ಲಿ ಗ್ರೇಡ್-1 ದರ್ಜೆಯ 327 ಹುದ್ದೆಗಳು ಪದವಿ ಕಾಲೇಜುಗಳಲ್ಲಿ ಮತ್ತು ಗ್ರೇಡ್-2 ದರ್ಜೆಯ 38 ಹುದ್ದೆಗಳು ಸ್ನಾತಕೋತ್ತರ ಕೋರ್ಸ್ ಇರುವ ಪದವಿ ಕಾಲೇಜುಗಳಲ್ಲಿ ಲಭ್ಯವಿವೆ. ಈ ಹುದ್ದೆಗಳಲ್ಲಿ ಇದುವರೆಗೂ ಕಾರ್ಯ ನಿರ್ವಹಿಸುತ್ತಿದ್ದವರು […]