ಬೊಮ್ಮಾಯಿ ಸರ್ಕಾರದ ಮೇಲೆ ಮತ್ತೊಂದು ಬಾಂಬ್ ಸಿಡಿಸಿದ ಸಿದ್ದರಾಮಯ್ಯ..!

ಬೆಂಗಳೂರು,ಡಿ.17- ಉನ್ನತ ಶಿಕ್ಷಣದ ಗುಣಮಟ್ಟವ ನ್ನು ಹಾಳುಗೆಡವಿರುವ ಬಿಜೆಪಿ ಸರ್ಕಾರ, ಒಂದು ವರ್ಷದಲ್ಲಿ ಎರಡು ಬಾರಿ ಸಹಾಯಕ ಪ್ರಾಧ್ಯಾಪಕರುಗಳ, ಉಪನ್ಯಾಸಕರ ವರ್ಗಾವಣೆಗೆ ಮುಂದಾಗಿರುವುದು ಅನುಮಾನ ಮೂಡಿಸಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಸಹಾಯಕ ಪ್ರಾಧ್ಯಾಪಕರುಗಳ ವರ್ಗಾವಣೆಯನ್ನು ಮಧ್ಯಂತರ ಅವಧಿಯ ಡಿಸೆಂಬರ್ ಮಾಹೆಯಲ್ಲಿ ನಡೆಸಲು ಆಯುಕ್ತಾಲಯ ಪ್ರಕಟಣೆಯನ್ನು ಹೊರಡಿಸಿದೆ. ಸರ್ಕಾರವು ವರ್ಗಾವಣೆಗಳಿಗೆ ತೋರಿಸುತ್ತಿರುವ ಆಸಕ್ತಿ, ಅಭಿವೃದ್ಧಿ ವಿಷಯಗಳಿಗೆ ಹಾಗೂ ನೇಮಕಾತಿಗಳಿಗೆ ತೋರಿಸುತ್ತಿಲ್ಲ. ಕಾಲೇಜು […]