ಕುಮಾರ ಕೃಪ ಅತಿಥಿ ಗೃಹದ ಸಹಾಯಕ ಪ್ರಧಾನ ವ್ಯವಸ್ಥಾಪಕ ಎತ್ತಂಗಡಿ

ಬೆಂಗಳೂರು,ಜ.7- ಕುಮಾರ ಕೃಪ ಅತಿಥಿ ಗೃಹದ ಸಹಾಯಕ ಪ್ರಧಾನ ವ್ಯವಸ್ಥಾಪಕ ದೇವರಾಜ್ ಎಚ್.ಎಸ್.ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ. ರೌಡಿ ಶೀಟರ್ ಸ್ಯಾಂಟ್ರೋ ರವಿಗೆ ಕುಮಾರ ಕೃಪ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿದ್ದ ದೇವರಾಜ್ ಎಚ್.ಎಸ್. ಅವರನ್ನು ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ದೇವರಾಜ್ ಅವರನ್ನು ಕೇಂದ್ರ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕೆಂದು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದ್ದಾರೆ. ಮೂರು ದಿನಗಳ […]
ಬಿಬಿಎಂಪಿ ಮುಖ್ಯ ಆಯುಕ್ತರ ತಲೆದಂಡವಾದರೆ ಉಗ್ರ ಹೋರಾಟ ಎಚ್ಚರಿಕೆ

ಬೆಂಗಳೂರು,ನ.30- ಚಿಲುಮೆ ಕರ್ಮಕಾಂಡಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ತಲೆದಂಡವಾಗಲು ದಿನಗಣನೆ ಆರಂಭವಾಗುತ್ತಿದ್ದಂತೆ ಯಾವುದೇ ಕಾರಣಕ್ಕೂ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಬಾರದು ಒಂದು ವೇಳೆ ಸರ್ಕಾರ ಇಂತಹ ಕಾರ್ಯಕ್ಕೆ ಮುಂದಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಕೆ ನೀಡಿದೆ. ಚಿಲುಮೆ ಸಂಸ್ಥೆಯವರು ಮಾಡಿರುವ ಕರ್ಮಕಾಂಡಕ್ಕೆ ಈಗಾಗಲೇ ದಕ್ಷ ಅಧಿಕಾರಿ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೀಗ ದಕ್ಷ ಅಧಿಕಾರಿಯಾಗಿರುವ […]
ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು,ಅ.18- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದರು. ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದ ಬಳಿಕ ಕಡತಗಳನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಕಾರು ಚಾಲಕ ನೀಡಿದ್ದ ದೂರಿನ ಅನ್ವಯ ಪಳ್ನೀರ್ […]