ಇಂದು ಓಲಾ, ಉಬರ್ ದರ ನಿಗದಿ.. ?

ಬೆಂಗಳೂರು,ನ.14- ಇಂದು ಸಂಜೆ ವೇಳೆಗೆ ಓಲಾ, ಉಬರ್ ದರ ನಿಗದಿಯಾಗುವ ಸಾಧ್ಯತೆಗಳಿವೆ.ಓಲಾ, ಉಬರ್ ದರ ನಿಧಿಗ ಕುರಿತಂತೆ ಇಂದು ಸಂಜೆ ಸಾರಿಗೆ ಇಲಾಖೆ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ದರ ನಿಗಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಂತಿನಗರದಲ್ಲಿರುವ ಸಾರಿಗೆ ಇಲಾಖೆ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಸಾರ್ವಜನಿಕರು, ಆಟೋ ಚಾಲಕರು ಹಾಗೂ ಓಲಾ, ಉಬರ್ ಕಂಪನಿಗಳ ಪ್ರತಿನಿಗಳು ಪಾಲ್ಗೊಳ್ಳುತ್ತಿದ್ದಾರೆ. ಓಲಾ, ಉಬರ್ ಸಂಸ್ಥೆಯವರು ಬೇಕಾಬಿಟ್ಟಿ ದರ ವಸೂಲಿ ಮಾಡುತ್ತಿದ್ದಾರೆ ಎಂಬ ದೂರಿನ ಆಧಾರದ ಮೇರೆಗೆ ಹೈಕೋರ್ಟ್ ಸೂಚನೆಯಂತೆ ದರ […]

ಪರವಾನಗಿ ಇಲ್ಲದೆ ಸಾರಿಗೆ ಸೇವೆ ನಡೆಸಿದರೆ ಕಠಿಣ ಕ್ರಮ : ಸಿಎಂ ಬೊಮ್ಮಾಯಿ

ಬೆಂಗಳೂರು,ಅ.11- ಪರಾವನಗಿ ಇಲ್ಲದೆ ಯಾವುದೇ ಸಂಸ್ಥೆಯನ್ನು ನಡೆಸಬಾರದು. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಯಾಣಿಕರಿಂದ ಹೆಚ್ಚು ದರ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಓಲಾ, ಊಬರ್ ಸಂಸ್ಥೆಗಳಿಗೆ ಈಗಾಗಲೇ ಸಾರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಈ ಸಮಸ್ಯೆ ಕುರಿತಂತೆ ನಿನ್ನೆ ಸಾರಿಗೆ ಇಲಾಖೆ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಯಾವುದೇ ಸಂಸ್ಥೆಯು ಪರವಾನಗಿ ಇಲ್ಲದೆ ಸಾರಿಗೆ ಸೇವೆಯನ್ನು […]

ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆ

ಬೆಂಗಳೂರು,ಸೆ.16-ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2016ರಲ್ಲಿ ವೇತನ ಪರಿಷ್ಕರಣೆಯಾಗಿದೆ. ಆನಂತರ ಪರಿಷ್ಕರಣೆಯಾಗಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆ. 2021ರಲ್ಲಿ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಿದ್ದರು. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ […]

ಸಾರಿಗೆ ನಿಗಮಗಳ ಸೋರಿಕೆ ತಪ್ಪಿಸಿ ಲಾಭ ಹೆಚ್ಚಿಸಿ: ಸಚಿವ ಶ್ರೀರಾಮುಲು

ಬೆಂಗಳೂರು,ಆ.3- ಸೋರಿಕೆ ಹಾಗು ನಷ್ಟದ ಪ್ರಮಾಣವನ್ನು ಹತೋಟಿಗೆ ತಂದು ನಿಗಮಗಳನ್ನು ಲಾಭದತ್ತ ಕೊಂಡೊಯ್ಯದಿದ್ದರೆ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಶಿಸ್ತುಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬಿಎಂಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಹಾಗೂ ಕೆಎಸ್‍ಆರ್‍ಟಿಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಸೋರಿಕೆ ಹಾಗೂ ನಷ್ಟ ತಡೆಗಟ್ಟುವ ಕುರಿತು ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಸಾರಿಗೆ ಸಂಸ್ಥೆ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ನಾಲ್ಕು […]