ತ್ರಿವೇಣಿ ಸಂಗಮ ಕುಂಭ ಮೇಳಕ್ಕೆ ಯೋಗಿ ಆದಿತ್ಯನಾಥ್
ಮಂಡ್ಯ,ಸೆ.28- ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿ ರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ನಾನಾ ಭಾಗಗಳಿಂದ ಸಾಧು, […]