ಒಡಿಶಾದಲ್ಲಿ ಘರ್ಷಣೆ ; ಬಿಜೆಪಿ ಕಾರ್ಯಕರ್ತರು, ಪೊಲೀಸರಿಗೆ ಗಾಯ

ಭುವನೇಶ್ವರ.ಮಾ.1-ಸಚಿವ ನಬಾ ಕಿಶೋರ್ ದಾಸ್ ಹತ್ಯೆ ಖಂಡಿಸಿ ಒಡಿಶಾದಲ್ಲಿ ನಡೆಯುತ್ತಿದ್ದ ರಾಜಕೀಯ ಮೆರವಣಿಗೆಯಲ್ಲಿ ಸಂಭವಿಸಿದ ಹೊಡೆದಾಟದಿಂದ ಹಲವಾರು ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯಲ್ಲಿ ಅನೇಕ ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ. ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಹತ್ಯೆ ಪ್ರಕರಣ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪದ ಮೇಲೆ ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ನೂರಾರು ಕಾರ್ಯಕರ್ತರು ನಡೆಸುತ್ತಿದ್ದ ಮೆರವಣಿಗೆಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಈ ಅವಘಡ ನಡೆದಿದೆ. ಬಲವಂತವಾಗಿ ನಿರ್ಮಿಸಿದ್ದ […]