ಗಣರಾಜ್ಯೋತ್ಸವಕ್ಕೆ ಸಕಲ ಸಿದ್ದತೆ

ಬೆಂಗಳೂರು,ಜ.24- ಈ ಬಾರಿಯ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಇಂದಿಲ್ಲ ತಿಳಿಸಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಗರ ಜಿಲ್ಲಾಧಿಕಾರಿ ದಯಾನಂದ್, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ವಿವರಗಳನ್ನು ನೀಡಿದರು. 26 ರಂದು ಬೆಳಿಗ್ಗೆ 8.58ಕ್ಕೆ ರಾಜ್ಯಪಾಲರು ಆಗಮಿಸಿ 9 ಗಂಟೆಗೆ ಸರಿಯಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುತ್ತಾರೆ. ನಂತರ ಅವರು ಗೌರವರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಕಳೆದ […]

ಈ ಬಾರಿ ಸೂರ್ಯ ಕಾಣುವ ಸಮಯದಲ್ಲೇ ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಜ.23- ಈ ಬಾರಿ ಯಾವುದೇ ಕಾರಣಕ್ಕೂ ರಾತ್ರೋ ರಾತ್ರಿ ಬಿಬಿಎಂಪಿ ಬಜೆಟ್ ಮಂಡನೆ ಮಾಡುವುದಿಲ್ಲ. ಹಗಲು ವೇಳೆ, ಅದರಲ್ಲೂ ಸೂರ್ಯ ಕಾಣುವ ಸಮಯದಲ್ಲಿಯೇ 2023-24ನೇ ಸಾಲಿನ ಆಯವ್ಯಯ ಮಂಡಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರಸ್ತುತ ಸಾಲಿನ ಆಯವ್ಯಯ ಕುರಿತು ಜನಾಭಿಪ್ರಾಯ ವರದಿ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ವಾರ್ಷಿಕ ಸಾಲಿನಲ್ಲಿ ರಾತ್ರಿ 11.30ಕ್ಕೆ ಪಾಲಿಕೆ ಆಯವ್ಯಯ ಸ್ವೀಕೃತಿ ಮತ್ತು ಪಾವತಿಯ ಪಟ್ಟಿಯನ್ನು ಪಾಲಿಕೆ ವೆಬ್ಸೈಟ್ […]

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ

ಬೆಂಗಳೂರು,ಜ.21- ಮೂಲಭೂತ ಸೌಲಭ್ಯ ಗಳನ್ನು ಕಲ್ಪಿಸುವ ಭರದಲ್ಲಿ ನಗರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ವತಿಯಿಂದ ಕೋಟಿ ವೃಕ್ಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕೋಟಿ ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರಣ್ಯ ಇಲಾಖೆ, ಪಾಲಿಕೆಯ ಅರಣ್ಯ ವಿಭಾಗವು ಸಮನ್ವಯ ಮಾಡಿಕೊಂಡು ನಗರದಾದ್ಯಂತ ಯತೇಚ್ಛವಾಗಿ ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಅದರ ಜೊತೆಗೆ ಕೋಟಿ […]

ಕೋವಿಶೀಲ್ಡ್ ಲಸಿಕೆ ಪೂರೈಸುವಂತೆ ಸರ್ಕಾರಕ್ಕೆ ಬಿಬಿಎಂಪಿ ಮನವಿ

ಬೆಂಗಳೂರು,ಡಿ.23- ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದ್ದು, ಬೂಸ್ಟರ್ ಡೋಸ್ಗೆ ಬೇಡಿಕೆ ಹೆಚ್ಚುತ್ತಿದೆ. ಕೋವಿಶೀಲ್ಡ್ ಲಸಿಕೆ ಪೂರೈಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ನಗರದಲ್ಲಿ 9 ರಿಂದ 10 ಲಕ್ಷ ಜನ ಮಾತ್ರ ಕೋವ್ಯಾಕ್ಸಿನ್ ಪಡೆದಿದ್ದರೆ, ಉಳಿದವರು ಹೆಚ್ಚು ಕೋವಿಶೀಲ್ಡ್ಲಸಿಕೆಯನ್ನು ಪಡೆದಿರುವ ಕಾರಣ ಕೋವಿಶೀಲ್ಡ್ಗೆ ಬೇಡಿಕೆ ಹೆಚ್ಚಿದೆ. ಕೋವಿಡ್ ಶೀಲ್ಡ್ ಪಡೆದವರಲ್ಲಿ ಬೋಸ್ಟರ್ ಡೋಸ್ಗೆ ಅರ್ಹವಾಗಿರುವವರ ಲೆಕ್ಕ ನಮ್ಮಲ್ಲಿ ಇದ್ದು, ಈಗ 60ರ ಮೇಲ್ಪಟ್ಟವರಿಗೆ ಮಾತ್ರ ಬೋಸ್ಟರ್ ಡೋಸ್ […]

ಬೂಸ್ಟರ್ ಲಸಿಕೆ ಹಾಕಿಸಿಕೊಂಡು ಪ್ರಾಣ ಉಳಿಸಿಕೊಳ್ಳಿ

ಬೆಂಗಳೂರು,ಡಿ.22- ನಗರದಲ್ಲಿ ಮತ್ತೆ ಕೊರೊನಾ ಕಾಟ ಆರಂಭವಾಗುವ ಸಾಧ್ಯತೆ ಇರುವುದರಿಂದ ಇದುವರೆಗೂ ಬೂಸ್ಟರ್ ಡೋಸ್ ಪಡೆದುಕೊಳ್ಳದೆ ಇರುವವರು ಕೂಡಲೇ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂಸ್ಟರ್ ಡೋಸ್‍ಗಳು ಲ್ಯಾಪ್ಸ್ ಆಗುತ್ತಿರುವುದರಿಂದ ಇದುವರೆಗೂ ಬೂಸ್ಟರ್ ಪಡೆದುಕೊಳ್ಳದವರೂ ಕೂಡಲೆ ಬೂಸ್ಟರ್ ಹಾಕಿಸಿಕೊಳ್ಳುವ ಮೂಲಕ ಸೋಂಕು ತಗುಲದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದ್ದಾರೆ. ಕೊರೊನಾ ಹರಡದಂತೆ ನೋಡಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ನಿನ್ನೆ ತಾಂತ್ರಿಕ […]

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪವಿಲ್ಲದಂತೆ ನೋಡಿಕೊಳ್ಳಿ : ತುಷಾರ್ ಗಿರಿನಾಥ್

ಬೆಂಗಳೂರು,ಡಿ.20- ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ಹಾಗೂ ಸೇರ್ಪಡೆ, ರದ್ದತಿ ಹಾಗೂ ಮಾರ್ಪಾಡುಗಳಲ್ಲಿ ಯಾವುದೇ ಲೋಪಗಳಿಲ್ಲದಂತೆ ನೋಡಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿ ಪರಿಷ್ಕರಣೆ, ಹೆಸರು ಸೇರ್ಪಡೆ, ರದ್ದತಿ ಮತ್ತು ಮಾರ್ಪಾಡು ಕುರಿತಂತೆ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಿರುವ ಆಯುಕ್ತರು ರಾಜಾಜಿನಗರದ ಹಲವಾರು ಮನೆಗಳಿಗೆ ಭೇಟಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಸಂಬಂಧಪಟ್ಟ ಅಧಿಕಾರಿಗಳ ಜೊತೆ ರಾಜಾಜಿ […]

ಕೇಳ್ರಪ್ಪ ಕೇಳಿ, ಹೊಸ ವರ್ಷಕ್ಕೂ ಮುನ್ನ ಬೆಂಗಳೂರು ರಸ್ತೆಗಳು ಗುಂಡಿ ಮುಕ್ತವಾಗಲಿವೆಯಂತೆ..!

ಬೆಂಗಳೂರು,ಡಿ.20-ಹೊಸ ವರ್ಷ ಆರಂಭಕ್ಕೂ ಮುನ್ನ ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭರವಸೆ ನೀಡಿದ್ದಾರೆ. ನಗರದಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚಲಾಗಿತ್ತು. ಇತ್ತಿಚೆಗೆ ಬಿದ್ದ ಮಳೆಯಿಂದಾಗಿ ಇನ್ನು ಕೆಲವು ಕಡೆಗಳರಲ್ಲಿ ರಸ್ತೆಗಳಲ್ಲಿ ಗುಂಡಿ ಬಿದ್ದಿರುವುದನ್ನು ಗಂಭೀರವಾಗಿ ಪರಿಗಣಿಸಿ ಡಿ.31ರೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ನಗರದ ಪ್ರಮುಖ ರಸ್ತೆಗಳನ್ನು ಡಿ.31ರೊಳಗೆ ಮುಚ್ಚಲೆ ಬೇಕು. 31 ರ ನಂತರ ಫೀಕ್ಸ್ ಮೈ ಸ್ಟ್ರೀಟ್ […]

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್ ಶ್ರೇಣಿಯ ಅಧಿಕಾರಿಗಳ ನೇಮಕ

ಬೆಂಗಳೂರು, ಡಿ.16- ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣ ಸಂಬಂಧ ಇದೀಗ ಬಿಬಿಎಂಪಿ ಬರೋಬ್ಬರಿ 12 ಕೆಎಎಸ್ ಶ್ರೇಣಿ ಅಧಿಕಾರಿಗಳನ್ನು ನೇಮಿಸಿ ಪರಿಷ್ಕರಣೆ ಪ್ರಕ್ರಿಯೆಗೆ ಮುಂದಾಗಿದೆ. ಈ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಈಗಾಗಲೇ 12 ಕೆಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಮತದಾರರ ಮಾಹಿತಿ ಪರಿಶೀಲನೆಯನ್ನು ಈ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದರು.ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರದಲ್ಲಿ ಮತದಾರರ ಮಾಹಿತಿ ಪರಿಷ್ಕರಣೆ ಆಗುತ್ತಿದೆ. ಜತೆಗೆ ವಾರಕ್ಕೊಮ್ಮೆ ರಾಜಕೀಯ […]

ವೋಟರ್ ಐಡಿ ಹಗರಣ: ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ ಸಾಧ್ಯತೆ

ಬೆಂಗಳೂರು,ನ.29- ಮತದಾರರ ಪಟ್ಟಿ ಅಕ್ರಮ ಹಗರಣ ವ್ಯಾಪಕ ಸದ್ದು ಮಾಡುತ್ತಿದ್ದಂತೆ ಬಿಬಿಎಂಪಿಯಲ್ಲಿ ಆಯುಕ್ತರ ತಲೆ ದಂಡಕ್ಕೆ ಕ್ಷಣಗಣನೆಗಳು ಶುರುವಾಗಿವೆ. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಎತ್ತಂಗಡಿ ಮಾಡಿ ಸಮರ್ಥ ಅಧಿಕಾರಿಗಳನ್ನು ನೇಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಬಿಬಿಎಂಪಿಯ ಅಪರ ಚುನಾವಣಾಧಿಕಾರಿಗಳಾಗಿರು ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದ್ದು, ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ. ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಯಶಸ್ವಿಯಾಗಿ ಅಧಿಕಾರ ನಡೆಸಿದ್ದ ಮಂಜುನಾಥ್, ಗೌರವ್‍ಗುಪ್ತ ಅಥವಾ ರಾಜೇಶ್ ಗೌಡ ಅವರಲ್ಲಿ ಒಬ್ಬರನ್ನು […]

ಮತದಾರರ ವೈಯಕ್ತಿಕ ಮಾಹಿತಿ ಕಳುವಿನ ಬಗ್ಗೆ ದಾಖಲೆ ಸಿಕ್ಕಿಲ್ಲ: ತುಷಾರ್ ಗಿರಿನಾಥ್

ಬೆಂಗಳೂರು,ನ.19- ಚಿಲುಮೆ ಸಂಸ್ಥೆ ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿರುವ ಬಗ್ಗೆ ಯಾವುದೇ ದಾಖಲೆಯಿಲ್ಲ. ಆದರೂ ಅನುಮಾನದ ಮೇರೆಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಲುಮೆ ಸಂಸ್ಥೆ ಮತದಾರರ ದತ್ತಾಂಶ ಕಳುವು ಮಾಡುತ್ತಿದೆ ಎಂದು ಕಳೆದ ಸೆ.29ರಂದು ದೂರು ಬಂದಿತ್ತು. ಹೀಗಾಗಿ ಅಂದಿನ ಜಿಲ್ಲಾಧಿಕಾರಿಗಳು ಸಂಸ್ಥೆಗೆ ಷೋಕಾಸ್ ನೋಟೀಸ್ ಕೂಡ ನೀಡಿದ್ದರು ಎಂದು ಅವರು ಮಾಹಿತಿ ನೀಡಿದರು. ಇದೇ ಮೊದಲ ಬಾರಿಗೆ ಹೊರಜಗತ್ತಿಗೆ […]