ಖರ್ಗೆ ಹೆಸರಿಗಷ್ಟೇ ಕಾಂಗ್ರೆಸ್ ಅಧ್ಯಕ್ಷರು, ಈಗಲೂ ಜೀ ಹುಜೂರ್ ಸಂಸ್ಕೃತಿ ಇದೆ : ಬಿಜೆಪಿ ವ್ಯಂಗ್ಯ

ಬೆಂಗಳೂರು,ಡಿ.13- ಕರ್ನಾಟಕ ಕಾಂಗ್ರೆಸ್ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ ಖರ್ಗೆ ಅವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಸ್ವಂತಿಕೆಯನ್ನೇ ಮರೆತು ಜೀ ಹುಜೂರ್ ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯಾಧ್ಯಕ್ಷರಿಂದ ಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರವರೆಗೂ ಬೇಲ್ ಮೇಲೆ ಬಾಳು ಸಾಗಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಕ್ಕದ ರಾಜ್ಯದಿಂದ ನಾಯಕರನ್ನು ಆಮದು ಮಾಡಿಕೊಂಡು ಅವರಿಂದಲೂ […]

ಯಡಿಯೂರನವರನ್ನೇ ಮನೆಗೆ ಕಳುಹಿಸಿದ ಬಿಜೆಪಿಗೆ ಬೊಮ್ಮಾಯಿ ಯಾವ ಲೆಕ್ಕ : ಕಾಂಗ್ರೆಸ್

ಬೆಂಗಳೂರು, ಆ.10- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆಯ ಕುರಿತು ಟ್ವೀಟ್ ಮಾಡಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿರುವ ಕಾಂಗ್ರೆಸ್, ಇಂದು ಕೂಡ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ವಿರುದ್ಧ ಮತ್ತಷ್ಟು ವಾಗ್ದಾಳಿ ನಡೆಸಿದೆ. ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಮುಖ್ಯಮಂತ್ರಿಗಳೆಂದರೆ ಪೊಪೆಟ್‍ಗಳು ಇದ್ದ ಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ. ಬಿ.ಎಸ್.ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಬಸವರಾಜ ಬೊಮ್ಮಾಯಿ ಅವರು ಯಾವ ಲೆಕ್ಕ ಎಂದು ಲೇವಡಿ ಮಾಡಿದೆ. ಸಂತೋಷ ಕೂಟಕ್ಕೆ ಸಂತೋಷಪಡಿಸುವ […]