ರಾಹುಲ್ ಗಾಂಧಿಯವರಿಗೆ ಕರ್ನಾಟಕ ಬಿಡುವ ಮುನ್ನ ಇಂಧನ ತುಂಬಿಸಿಕೊಳ್ಳಿ : ಬಿಜೆಪಿ ಟ್ವೀಟ್

ಬೆಂಗಳೂರು,ಅ.15- ಕರ್ನಾಟಕಕ್ಕೆ ವಿದಾಯ ಹೇಳುವ ಮುನ್ನ ರಾಹುಲ್ ಗಾಂಧಿಯವರಿಗೆ ಮತ್ತೊಮ್ಮೆ ಎಚ್ಚರಿಸುತ್ತಿದ್ದೇವೆ. ಮುಂದಿನ ಯಾತ್ರೆಗೆ ಇಲ್ಲಿಯೇ ಇಂಧನ ತುಂಬಿಸಿಕೊಳ್ಳಿ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಡೀಸೆಲ್ ದರ ಆಂಧ್ರಪ್ರದೇಶದಲ್ಲಿ 99.15 ರೂ, ತೆಲಂಗಾಣ 97.82 ರೂ. ರಾಜಸ್ಥಾನ 93.72 ಮತ್ತು ಕರ್ನಾಟಕ 87.94, ಬಿಜೆಪಿಯೇತರ ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ತಾಗಬಹುದು ಎಂದು ಕುಹುಕವಾಡಿದೆ. ಇಂದಿರಾಗಾಂಧಿ ಮಂಗಳೂರಿನಲ್ಲಿ ಸ್ರ್ಪಧಿಸಿದಾಗ ಅವರ ಗೆಲುವಿನಲ್ಲಿ ಮೋಟಮ್ಮ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅದೇ ಮೋಟಮ್ಮ […]

ಕಾಂಗ್ರೆಸ್‍ನಿಂದ ಗೊಂದಲದ ಟ್ವಿಟ್ : ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು,ಆ.11- ಕಾಂಗ್ರೆಸ್ ನಾಯಕರ ಟೀಕೆಗಳು ನನಗೆ ಆಶೀರ್ವಾದವಿದ್ದಂತೆ. ನಾನು ಈಗಲೂ ಕೂಡ ಸ್ಥಿತಪ್ರಜ್ಞೆಯಲ್ಲಿದ್ದೇನೆ. ರಾಜ್ಯದ ಜನತೆ ನನ್ನ ಬಗ್ಗೆ ನಂಬಿಕೆ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶ ಸ್ಥಿತಿಯಲ್ಲಿರುವ ಕಾಂಗ್ರೆಸ್, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಗೊಂದಲ ಸೃಷ್ಟಿಸುವುದು ಹೊಸದೇನಲ್ಲ. ಅವರಿಗೆ ಮಾಡಲು ಬೇರೆ ಕೆಲಸಗಳಿಲ್ಲ. ಹೀಗಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ರಾಜ್ಯದ ಜನತೆ ಖಂಡಿತವಾಗಿಯೂ ನಂಬುವುದಿಲ್ಲ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯ ಏನೆಂಬುದು ನನಗೆ […]

ಸಿಎಂ ಬದಲಾಗುತ್ತಾರೆ ಎಂಬ ಕಾಂಗ್ರೆಸ್ ಟ್ವೀಟ್‍ಗೆ ರೊಚ್ಚಿಗೆದ್ದ ಕೇಸರಿ ಪಡೆ

ಬೆಂಗಳೂರು,ಆ.10- ಅಧಿಕೃತ ವಿರೋಧ ಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಮಾಡಿರುವ ಟ್ವೀಟ್‍ಗೆ ಕೇಸರಿ ಪಡೆ ಸಿಡಿದೆದ್ದಿದೆ. ಶೀಘ್ರದಲ್ಲೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಟ್ವೀಟ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು ಸೇರಿದಂತೆ ಸಾಲು ಸಾಲು ನಾಯಕರು ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಅಕಾರ ಕುರ್ಚಿಯನ್ನು ಮರೆಮಾಚಲು ಬಿಜೆಪಿ ಮೇಲೆ ಗೂಬೆ […]

ಕಾಂಗ್ರೆಸ್ ಟ್ವೀಟ್‍ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕೆಂಡ

ಬೆಂಗಳೂರು,ಆ.10-ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆಯಾಗಿ 3ನೇ ಮುಖ್ಯಮಂತ್ರಿಯಾಗುತ್ತಾರೆ ಎಂಬ ಕಾಂಗ್ರೆಸ್ ಟ್ವೀಟ್‍ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರವಿಲ್ಲದೆ ನಿರುದ್ಯೋಗಿಯಾಗಿರುವ ಕಾಂಗ್ರೆಸ್ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಾ ಸರ್ಕಾರ ಮತ್ತು ನಮ್ಮ ಪಕ್ಷದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ ಎಂದು ತಿರುಗೇಟು ನೀಡಿದರು. ಬೊಮ್ಮಾಯಿ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂದು ಹೇಳಲು ಕಾಂಗ್ರೆಸ್‍ನವರಿಗೆ ಯಾವ ನೈತಿಕತೆ ಇದೆ. ಒಂದು ಅಧಿಕೃತ […]

ಬಿಎಲ್ ಸಂತೋಷ್ ವಿರುದ್ಧ ಕಾಂಗ್ರೆಸ್ ಟ್ವೀಟ್‍ : ಕಮಲ ನಾಯಕರು ಕೆಂಡ

ಬೆಂಗಳೂರು,ಜು.19- ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಕಾಂಗ್ರೆಸ್ ಮಾಡಿರುವ ಟ್ವೀಟ್‍ಗೆ ಕಮಲ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಸಚಿವರಾದ ಡಾ. ಸುಧಾಕರ್, ಅಶ್ವತ್ಥ್ ನಾರಾಯಣ್, ಆರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಬಿ.ಸಿ ನಾಗೇಶ್,ಕೆ ಗೋಪಾಲಯ್ಯ, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಟ್ವೀಟ್‍ಗೆ ತಿರುಗೇಟು ನೀಡಿದ್ದಾರೆ. ಬಿ.ಎಲ್.ಸಂತೋಷ್ ಅವರನ್ನು ಬಿಟ್ಟುಕೊಡದ ಸಚಿವರು, ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದು, ಟ್ವೀಟ್ ಮೂಲಕವೇ ತಿರುಗೇಟು ಕೊಟ್ಟಿದ್ದಾರೆ. ಸಚಿವ ಡಾ.ಸುಧಾಕರ್: ಒಂದು ಕುಟುಂಬದ […]