ಒಂದೇ ವಾರದಲ್ಲಿ ರಾಜ್ಯಕ್ಕೆ 2 ಬಾರಿ ಆಗಮಿಸಲಿರೋ ಮೋದಿ , ಬಿಜೆಪಿಯಲ್ಲಿ ಸಂಚಲನ

ಬೆಂಗಳೂರು,ಜ.10- ರಾಜ್ಯಕ್ಕೆ ಗುರುವಾರ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಲ್ಲಿ ನಡೆಯಲಿರುವ ಯುವಜನೋತ್ಸವ ಕಾರ್ಯಕ್ರಮದ ಮೂಲಕ ವಿಧಾನಸಭೆ ಚುನಾವಣೆಗೆ ಅಧಿಕೃತವಾಗಿ ಕಹಳೆ ಮೊಳಗಿಸಲಿದ್ದಾರೆ. ಇದಾದ ನಂತರ 19ರಂದು ಪುನಃ ಕಲಬುರಗಿಗೆ ಆಗಮಿಸಲಿದ್ದು, ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸುವ ಮೂಲಕ ಪರೋಕ್ಷವಾಗಿ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.ಒಂದೇ ವಾರದಲ್ಲಿ ಎರಡು ದಿನಗಳ ಕಾಲ ಪ್ರಧಾನಿಯವರು ಆಗಮಿಸುತ್ತಿರುವುದರಿಂದ ಬಿಜೆಪಿಯಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಗುರುವಾರ ಛೋಟಾ ಮುಂಬೈ ಎಂದೇ ಗುರುತಿಸಿಕೊಂಡಿರುವ ಹುಬ್ಬಳ್ಳಿಗೆ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ […]